ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲೂ ಗ್ಯಾರಂಟಿ ಯೋಜನೆ ಜಾರಿ – ಜಮೀರ್ ಅಹಮದ್ ಖಾನ್

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಹೈದರಾಬಾದ್ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲೂ ಗ್ಯಾರಂಟಿ ಯೋಜನೆ ಜಾರಿಗೊಳಿಸುತ್ತೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ತೆಲಂಗಾಣ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಟಾರ್ ಪ್ರಚಾರಕರಾಗಿರುವ ಅವರು ಗುರುವಾರ ‘ಮೈನಾರಿಟಿ ಡಿಕ್ಲರೇಷನ್ ‘ ಬಿಡುಗಡೆ ಮಾಡಿ, ಕರ್ನಾಟಕದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಐದು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುತ್ತಿದ್ದೇವೆ. ಇಲ್ಲೂ ಜನತೆ ಕಾಂಗ್ರೆಸ್ ಬಯಸಿದ್ದು ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.


ತೆಲಂಗಾಣ ದಲ್ಲಿ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ. ಜನತೆ ಕೆಸಿ ಆರ್ ಆಡಳಿತದಿಂದ ಬೇಸರಗೊಂಡಿದ್ದು, ಕಾಂಗ್ರೆಸ್ ಗೆ ಒಂದು ಅವಕಾಶ ನೀಡಲು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.
ದೇಶದ ಭವಿಷ್ಯ, ತೆಲಂಗಾಣ ಅಭಿವೃದ್ಧಿಗೆ ಕಾಂಗ್ರೆಸ್ ಬೇಕಾಗಿದೆ. ದಶಕಗಳ ತೆಲಂಗಾಣ ಪ್ರತ್ಯೇಕ ರಾಜ್ಯ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಎಂದು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕಾಂಗ್ರೆಸ್ ಬದ್ಧ ವಾಗಿದ್ದು, ಉದ್ಯೋಗ ಮತ್ತು ಶಿಕ್ಷಣ ದಲ್ಲಿ ಮೀಸಲಾತಿ ಜಾರಿಗೊಳಿಸಲಿದೆ. ಕೆಸಿ ಆರ್ ಶೇ.12 ರಷ್ಟು ಮೀಸಲಾತಿ ಕೊಡುವ ಭರವಸೆ ನೀಡಿ ಎರಡು ಬಾರಿ ಅಧಿಕಾರ ನಡೆಸಿದರೂ ಕೊಡದೆ ವಂಚಿಸಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ, ಆರ್ಥಿಕ ಸಬಲೀಕರಣ, ವಖ್ಫ್ ಆಸ್ತಿ ರಕ್ಷಣೆ ಸೇರಿ ಇಂದು ನಾವು ಮೈನಾರಿಟಿ ಡಿಕ್ಲರೇಷನ್ ಮಾಡಿದ್ದೇವೆ. ಇದು ನಮ್ಮ ಖಚಿತ ಭರವಸೆ ಎಂದು ಹೇಳಿದರು.
ತೆಲಂಗಾಣ ದಲ್ಲೂ ಹಿರಿಯ ನಾಗರಿಕರಿಗೆ ಮಾಸಿಕ 4 ಸಾವಿರ, ಹೆಣ್ಣು ಮಕ್ಕಳಿಗೆ 2500 ಸಾವಿರ, ರೈತರಿಗೆ ವಾರ್ಷಿಕ 15ಸಾವಿರ, ಕೃಷಿ ಕಾರ್ಮಿಕರಿಗೆ 12 ಸಾವಿರ, ಮಹಿಳೆಯರಿಗೆ ಉಚಿತ ಬಸ್ ಸಂಚಾರ, ಬಡವರು ಮನೆ ನಿರ್ಮಿಸಿಕೊಳ್ಳಲು 5ಲಕ್ಷ ರೂ. ನೆರವು, 500 ರೂ. ಗೆ ಸಿಲಿಂಡರ್ ಭರವಸೆ ನೀಡಿದ್ದೇವೆ. ನೀವು ಆಶೀರ್ವಾದ ಮಾಡಿದರೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಶಿದ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ, ಎ ಐ ಸಿಸಿ ಕಾರ್ಯಕಾರಿ ಸದಸ್ಯ ನಾಸೀರ್ ಹುಸೇನ್, ಮಾಜಿ ಕ್ರಿಕೆಟಿಗ ಅಜರುದ್ದಿನ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಚಿವರು ಹೈದರಾಬಾದ್ ನಲ್ಲಿ ಪ್ರದೇಶ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ವಾರ್ ರೂಂ ಕಾರ್ಯನಿರ್ವಾಹಣೆ ಬಗ್ಗೆ ಮಾಹಿತಿ ಪಡೆದರು.
ನಂತರ ಎ ಐ ಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣು ಗೋಪಾಲ್ ಹಾಗೂ ಇತರೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿದರು

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು