ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಲಾಭಕ್ಕಾಗಿ ತರಾತುರಿಯ ಮಂದಿರ ಉದ್ಘಾಟನೆ : ದೂರವಿರಲು ಕಾಂಗ್ರೆಸ್ ತೀರ್ಮಾನ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಚುನಾವಣಾ ಲಾಭಕ್ಕಾಗಿ ತರಾತುರಿಯ ಮಂದಿರ ಉದ್ಘಾಟನೆ : ದೂರವಿರಲು ಕಾಂಗ್ರೆಸ್ ತೀರ್ಮಾನ

‘ಅಯೋಧ್ಯೆಯಲ್ಲಿ ರಾಮಮಂದಿರದ ಕೆಲಸಗಳು ಇನ್ನೂ ಬಾಕಿ ಉಳಿದಿದ್ದರೂ, ಬಿಜೆಪಿ ತನ್ನ ಚುನಾವಣಾ ಲಾಭಕ್ಕಾಗಿ ಮಂದಿರ ಉದ್ಘಾಟನೆಗೆ ತೊಡಗಿದೆ. ರಾಜಕೀಯ ಉದ್ದೇಶದಿಂದ ನಡೆಸುವ ಈ ಕಾರ್ಯದಿಂದ ದೂರ ಉಳಿಯಲು ಕಾಂಗ್ರೆಸ್ ತೀರ್ಮಾನಿಸಿದೆ’ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಇನ್ನೂ ಪೂರ್ಣಗೊಳ್ಳದ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಗಡಿಬಿಡಿ ಮಾಡುತ್ತಿದೆ. ಇದೊಂದು ರಾಜಕೀಯ ಪ್ರೇರಿತ ಕಾರ್ಯಕ್ರಮ ಎಂದು ಕಾಂಗ್ರೆಸ್ ದೂರಿದೆ.

ಇಂದು ಕಾಂಗ್ರೆಸ್ ಪಕ್ಷ ಹೊರಡಿಸಿದ ಅಧಿಕೃತ ಪ್ರಕಟಣೆಯಲ್ಲಿ ಪಕ್ಷ ಈ ರೀತಿಯಾಗಿ ರಾಮಮಂದಿರ ಉದ್ಘಾಟನೆ ಬಗ್ಗೆ ತನ್ನ ಅಭಿಪ್ರಾಯ ತಿಳಿಸಿದೆ.

“ಕಳೆದ ತಿಂಗಳು ಕಾಂಗ್ರೆಸ್ ಅಧ್ಯಕ್ಷರು ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಶ್ರೀ ಅಧೀರ್ ರಂಜನ್ ಚೌಧರಿ ಅವರು ಜನವರಿ 22, 2024 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಶ್ರೀರಾಮನನ್ನು ನಮ್ಮ ದೇಶದಲ್ಲಿ ಲಕ್ಷಾಂತರ ಜನರು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ವಿಚಾರವನ್ನು ರಾಜಕೀಯ ಪ್ರೇರಿತಗೊಳಿಸಿವೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಇನ್ನೂ ಪೂರ್ಣಗೊಳ್ಳದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಸ್ಪಷ್ಟವಾಗಿ ಮುಂದಿಡಲಾಗಿದೆ. 2019 ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಶ್ರೀ ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ ಮತ್ತು ಶ್ರೀ ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರೆಸ್ಸೆಸ್/ಬಿಜೆಪಿಯ ಈ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ನಿರಾಕರಿಸಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿಷ್ಠಾಪನಾ ಸಮಾರಂಭಕ್ಕೆ ಹಲವಾರು ಉನ್ನತ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗಿದೆ.

ಈ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಮತ್ತು ಸೀತಾರಾಮ್ ಯೆಚೂರಿ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿತ್ತು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು