ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಂದೂ ಬೇರೆ, ಹಿಂದುತ್ವ ಬೇರೆ.. ಬಿಜೆಪಿಯದು ಡೋಂಗಿ ಹಿಂದುತ್ವ – ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಹಿಂದೂ ಬೇರೆ, ಹಿಂದುತ್ವ ಬೇರೆ.. ಬಿಜೆಪಿಯದು ಡೋಂಗಿ ಹಿಂದುತ್ವ – ಸಿಎಂ ಸಿದ್ದರಾಮಯ್ಯ

“ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಮಾತನಾಡಿ, ಮೇಲಿನಂತೆ ಅಭಿಪ್ರಾಯ ಪಟ್ಟಿದ್ದಾರೆ.

ಬ್ರಿಟೀಷರ ಕಾಲದಲ್ಲೇ ಹುಟ್ಟಿದ RSS, ಸಂಘ ಪರಿವಾರದ ಯಾವೊಬ್ಬ ನಾಯಕರೂ ಬ್ರಿಟೀಷರ ವಿರುದ್ಧ ಹೋರಾಡಿಲ್ಲ. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

“ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರೂ-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ” ಎಂದು ಹೇಳಿದರು.

“ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಬುರುಡೆ ಬಿಡ್ತಾರೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಹಾತ್ಮ ಗಾಂಧಿಯವರು ಬ್ರಿಟಿಷರನ್ನು ಅಹಿಂಸೆಯ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು. ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು