ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

P

Peepal Media Desk • ರಾಜಕೀಯ

• 1 ನಿಮಿಷದ ಓದು

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

“ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಗುರುವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.

“ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೇ ಮೈತ್ರಿಯಲ್ಲಿ ತಿಕ್ಕಾಟ ನಡೆಯುತ್ತಿರಬಹುದು” ಎಂದು ತಿಳಿಸಿದರು.

“ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸುಮಾರು 10 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ? ಜೆಡಿಎಸ್ ಹಾಗೂ ಬಿಜೆಪಿ ವಿಲೀನವಾಗುವುದಾದರೆ ಈ ರೀತಿ ಮಾಡಬಹುದು” ಎಂದರು.

ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ:
ಪೆನ್ ಡ್ರೈವ್ ವಿಚಾರವಾಗಿ ನಿಮ್ಮ ಮೇಲೆ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರು ಈಗ ಪ್ರೀತಂಗೌಡ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, “ಈಗ ಆ ವಿಚಾರ ಬೇಡ, ಆಮೇಲೆ ಮಾತನಾಡೋಣ. ಈಗ ಪಾದಯಾತ್ರೆ ಬಗ್ಗೆ ಚರ್ಚೆ ಮಾಡೋಣ. ನಾವು ಅವರ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಸರಕಾರದ ಕಾಲದ 30 ಹಗರಣಗಳಿವೆ. ದಿನಾ ಒಂದೊಂದು ಹಗರಣ ಬಿಚ್ಚಿಡುತ್ತೇವೆ. ಅವರ ಪಾದಯಾತ್ರೆ ಅಂತಿಮ ರೂಪುರೇಷೆ ಬಂದರೆ ನಾವು ನಮ್ಮ ಕಾರ್ಯಸೂಚಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರಾಜಭವನದ ಮೂಲಕ ರಾಜ್ಯ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ಸಭೆ ಬಳಿಕ ನಾನು ಬಂದು ವಿವರಣೆ ನೀಡುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಿದೆ” ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಬಗ್ಗೆ ಪ್ರಧಾನಮಂತ್ರಿಗಳ ಜತೆ ಚರ್ಚೆ :
ಪ್ರಧಾನ ಮಂತ್ರಿಗಳ ಭೇಟಿ ವಿಚಾರವಾಗಿ ಕೇಳಿದಾಗ, “ಬೆಂಗಳೂರು ಬಹಳ ಪ್ರಮುಖವಾದ ನಗರ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಆದಾಯ ನೀಡುತ್ತಿರುವ ನಗರ. ವಿಶ್ವದ ನಾಯಕರು ಹಾಗೂ ವಿಶ್ವದ ಹೂಡಿಕೆದಾರರು ಬೆಂಗಳೂರಿನ ಮೇಲೆ ಆಸಕ್ತಿ ಹೊಂದಿದ್ದಾರೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಅನೇಕ ಮೂಲಭೂತ ಸೌಕರ್ಯ ಯೋಜನೆಗಳನ್ನು ನೀಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ವಿಮಾನ ನಿಲ್ದಾಣ ಮೇಲ್ಸೇತುವೆ, ನೆಲಮಂಗಲ ಮೇಲ್ಸೆತುವೆ ಯೋಜನೆಗಳನ್ನು ನೀಡಲಾಗಿತ್ತು. ಈಗ ಜನಸಂಖ್ಯೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆಗೆ ಮಿಲಿಟರಿ ಭೂಮಿ ಬೇಕಾಗಿದೆ. ಅದನ್ನು ದೊರಕಿಸಿಕೊಡುವಂತೆ ಮನವಿ ಮಾಡಿದ್ದೇವೆ. ಈ ವಿಚಾರವಾಗಿ ರಕ್ಷಣಾ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿದ್ದೇವೆ. ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಇದರ ಜತೆಗೆ ಈ ಹಿಂದೆ ಬಜೆಟ್ ನಲ್ಲಿ ಘೋಷಣೆಯಾಗಿರುವ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿ ಪರಿಶೀಲಿಸುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ” ಎಂದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version