ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾನು ಯಾವುದೇ ತಪ್ಪು ಮಾಡಿಲ್ಲ, ಯಾರಿಗೂ ತಲೆಬಾಗಲ್ಲ: ಕೇಜ್ರಿವಾಲ್

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ನಾನು ಯಾವುದೇ ತಪ್ಪು ಮಾಡಿಲ್ಲ, ಯಾರಿಗೂ ತಲೆಬಾಗಲ್ಲ: ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ಸಂಚಲನಕಾರಿ ಆರೋಪ ಮಾಡಿದ್ದಾರೆ.

ನಿನ್ನೆಯವರೆಗೂ ತಮ್ಮ ಪಕ್ಷದ ಶಾಸಕರು ಹಾಗೂ ರಾಯಭಾರಿ ಕಚೇರಿಗಳಿಗೆ 25 ಕೋಟಿ ರೂಪಾಯಿ ಆಮಿಷ ಒಡ್ಡಿ ಬಿಜೆಪಿ ಸೇರಲು ಆಮಿಷವೊಡ್ಡುತ್ತಿದ್ದರು ಎಂದು ಕೇಜ್ರಿವಾಲ್ ಆರೋಪ ಮಾಡಿರುವುದು ಈಗಾಗಲೇ ಸುದ್ದಿಯಲ್ಲಿದೆ. ಬಿಜೆಪಿ ದೆಹಲಿ ಮುಖ್ಯಸ್ಥ ವೀರೇಂದ್ರ ಸಚ್ ದೇವಾ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಕೇಜ್ರಿವಾಲ್‌ಗೆ ಈ ಕುರಿತು ವಿವರಣೆ ನೀಡುವಂತೆ ನೋಟಿಸ್ ಕಳುಹಿಸಿದ್ದಾರೆ.

ಈಗ ಹೊಸದಾಗಿ, ಭಾನುವಾರ ನಡೆದ ಸಭೆಯೊಂದರಲ್ಲಿ ಕೇಜ್ರಿವಾಲ್‌ ಪಕ್ಷದ ಕಾರ್ಯಕರ್ತರಿಗಲ್ಲದೆ ತನಗೂ ಬಿಜೆಪಿ ಸೇರುವಂತೆ ಆಮಿಷ ಒಡ್ಡಲಾಗುತ್ತಿದೆಯೆಂದು ಆರೋಪಿಸಿದ್ದಾರೆ. ಮುಂದುವರೆದು ಅವರು ಬಿಜೆಪಿಯ ಮುಸುಕು ಹಾಕಿಕೊಂಡರೆ ಮಾಡಿದ ತಪ್ಪುಗಳಿಗೆಲ್ಲ ಮಾಫಿ ದೊರೆಯುತ್ತದೆ ಎಂದು ಕಟಕಿಯಾಡಿದ್ದಾರೆ.

ಬಿಜೆಪಿಯ ಈ ನಡೆಯನ್ನು ಟೀಕಿಸಿರುವ ಅವರು, “ತಪ್ಪು ಮಾಡಿರುವವರು ಬಿಜೆಪಿ ಸೇರುತ್ತಾರೆ. ಆದರೆ ನಾನು ಯಾವುದೇ ತಪ್ಪು ಮಾಡಿಲ್ಲ ಹೀಗಾಗಿ ಬಿಜೆಪಿಗೆ ಹೆದರುವ ಅಥವಾ ಆ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಖಾರವಾಗಿ ನುಡಿದಿದ್ದಾರೆ. ದೆಹಲಿಯ ಅಭಿವೃದ್ಧಿಗೆ ತಾವು ಮತ್ತು ತಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ಶಾಲೆ, ಆಸ್ಪತ್ರೆ, ರಸ್ತೆ ನಿರ್ಮಿಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಕೇಜ್ರಿವಾಲ್ ತಮ್ಮ ಮತ್ತು ತನ್ನ ಪಕ್ಷದ ನಾಯಕರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳು ಸುಳ್ಳು ಪ್ರಕರಣಗಳಾಗಿವೆ ಎಂದು ಆರೋಪಿಸಿದರು. ಆ ಎಲ್ಲಾ ಪ್ರಕರಣಗಳು ಇಂದಲ್ಲ ನಾಳೆ ವಜಾ ಆಗಲಿವೆ ಎಂದು ಈ
ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಆದರೆ, ದೆಹಲಿಯ ಅಭಿವೃದ್ಧಿ ಕಾರ್ಯಗಳು ನಿಲ್ಲಬಾರದು ಎಂದೂ ಅವರು ಹೇಳಿದರು.

ನನ್ನ ದೇಹದಲ್ಲಿ ಜೀವ ಇರುವವರೆಗೂ ದೆಹಲಿಯ ಅಭಿವೃದ್ಧಿಗೆ ಕಟಿಬದ್ಧನಾಗಿ ದುಡಿಯುವುದಾಗಿ ಅವರು ಭರವಸೆ ನೀಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಪ್‌ ಪಕ್ಷವನ್ನು ಹೇಗಾದರೂ ಕಟ್ಟಿ ಹಾಕಲು ಪ್ರಯತ್ನಿಸುತ್ತಿದ್ದು, ಈ ನಿಟ್ಟಿನಲ್ಲಿ ಈಗಿನ ರಾಜಕೀಯ ಬೆಳವಣಿಗೆಗಳು ರಾಜಕೀಯ ಆಸಕ್ತರ ಗಮನವನ್ನು ಸೆಳೆದಿರುವುದು ಸುಳ್ಳಲ್ಲ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು