ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಅಂಬಾನಿ ಅದಾನಿ ಜೇಬು ತುಂಬಿಸಿದರೆ ಆರ್ಥಿಕ ಪ್ರಗತಿ ಆಗುತ್ತಾ?” : ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

“ಅಂಬಾನಿ ಅದಾನಿ ಜೇಬು ತುಂಬಿಸಿದರೆ ಆರ್ಥಿಕ ಪ್ರಗತಿ ಆಗುತ್ತಾ?” : ಸಿಎಂ ಸಿದ್ದರಾಮಯ್ಯ

ಬರೀ ಅಂಬಾನಿ-ಅದಾನಿ ಜೇಬಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟರೆ ಇಡೀ ದೇಶವೇ ಪರಿತಪಿಸುವಂತಾಗಿದೆ. ಇದೇ ಕಾರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯದಂತಹ ಯೋಜನೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೀಗಾಗಿ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೂ ಹಣ ಹಾಕುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಆ ಮೂಲಕ ಶ್ರಮಿಕ ವರ್ಗದ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ನಾವು ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ನಂತರ ಮಾತು ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವ ಹೆಚ್.ಆಂಜನೇಯ ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು