ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ – ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ರ

ರಮೇಶ್‌ ಹಾಸನ್‌ • ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ – ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತೀವ್ರವಾಗಿ ಖಂಡಿಸಿದ್ದಾರೆ.ನಿಮಗೆ ದೇಶದ ಯುವಶಕ್ತಿಯನ್ನು ಕಂಡು ಅಷ್ಟೊಂದು ಭಯವಿದ್ದರೆ, ಕೇವಲ ದೆಹಲಿಯನ್ನಷ್ಟೇ ಏಕೆ, ಇಡೀ ದೇಶವನ್ನೇ ಬಂದ್ ಮಾಡಿ ಎಂದು ಕಿಡಿಕಾರಿದ್ದಾರೆ.ಶನಿವಾರ ಜಂತರ್ ಮಂತರ್‌ನಲ್ಲಿ ಸಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಒಂದು ದಿನ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ದೀಪ್ಕೆ, ನೀವು ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದೆ. ಆದರೆ, ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿಯನ್ನೂ ನಿರಾಕರಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ದೀಪ್ಕೆ, ಜಂತರ್ ಮಂತರ್ ಪ್ರತಿಭಟನೆಗಳಿಗೆ ನಿಗದಿಪಡಿಸಿರುವ ಸ್ಥಳವಾಗಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಸರ್ಕಾರದ ಅನುಮತಿ ಪಡೆಯುವ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ. ಅಕ್ಟೋಬರ್ 10ರಂದು ಬೆಳಿಗ್ಗೆ 4ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಆಗಮಿಸಬೇಕಿದ್ದ ಆಯ್ದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳನ್ನು ರೈಲ್ವೆ ಮಂಡಳಿ ರದ್ದುಗೊಳಿಸಿದ ಬೆನ್ನಲ್ಲೇ ದೀಪ್ಕೆ ಈ ಹೇಳಿಕೆ ನೀಡಿದ್ದಾರೆ.ಎರಡೂ ರೈಲು ನಿಲ್ದಾಣಗಳ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.ಇದೇ ವೇಳೆ, ಪ್ರತಿಭಟನೆಗಾಗಿ ದೆಹಲಿಗೆ ಆಗಮಿಸುವ ನಿರೀಕ್ಷೆಯಿರುವ ಯುವಕರ ಸಂಚಾರವನ್ನು ನಿಯಂತ್ರಿಸುವ ಉದ್ದೇಶದಿಂದ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ದೆಹಲಿ ಪೊಲೀಸರು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ಮನವಿ ಮಾಡಿದ್ದಾರೆ.ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸುತ್ತಿರುವ ಪ್ರತಿಪಕ್ಷಗಳು, ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಪ್ರತಿಭಟನೆಗೆ ಮುಂದಾಗಿದೆ.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version