ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ: ಸಿ.ಎಂ.ಸಿದ್ದರಾಮಯ್ಯ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಮೇ 5: ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂಪನಾ ಅವರ ” ಚಾರು ವಸಂತ” ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ “ಚಾರು ವಸಂತ” ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ 16 ಭಾಷೆಗಳಿಗೆ ತರ್ಜುಮೆ ಆಗಿ, ಈಗ 17ನೇ ಭಾಷೆಯಾಗಿ ಪರ್ಷಿಯನ್ ಗೆ ಅನುವಾದಗೊಂಡಿರುವುದು ಕನ್ನಡದ ಹೆಮ್ಮೆ ಎಂದರು.

ಕನ್ನಡ ವಿಶ್ವದ ಎಲ್ಲಾ ಭಾಷೆಗಳಿಗೆ ಅನುವಾದಗೊಂಡರೆ ಕನ್ನಡದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.

ಹಂಪನಾ ಅವರ ಚಾರು ವಸಂತ ಕಾವ್ಯ , ನಾಟಕವಾಗಿ ಕೂಡ ಜನಮನ್ನಣೆ ಗಳಿಸಿದೆ. ಹಂಪನಾ ದಂಪತಿ ನನಗೆ ಬಹಳ ವರ್ಷಗಳಿಂದ ಆತ್ಮೀಯರಾಗಿದ್ದರು. ನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ಇದೆ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದ ಬಳಿಕ ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳ ಹೊರತಾಗಿ ಬೇರೆ ಕಡೆ ಇಂಗ್ಲಿಷ್ ಬಳಸುವುದೇ ಇಲ್ಲ. ಹೀಗಾಗಿ ನನಗೆ ಇಂಗ್ಲಿಷ್ ಹೆಚ್ಚು ಬರದಂತಾಯಿತು.  ಎಂದರು.

ಮಲ ಹೊರುವ ಪದ್ಧತಿ ಬಗ್ಗೆ ಇರುವ ಕೃತಿ ಇದಾಗಿದೆ. ಜಾತಿ ವ್ಯವಸ್ಥೆ ರೂಪಿಸಿದ ಶಾಪ ಅಸ್ಪೃಶ್ಯತೆ. ಇದು ಅಳಿಯಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ಸಿಕ್ಕಾಗ ಮಾತ್ರ ಚಲನೆ ಇಲ್ಲದ ಜಾತಿ ವ್ಯವಸ್ಥೆ ಅಳಿಯಲು ಸಾಧ್ಯ ಎಂದರು.

ಚಾರು ವಸಂತ ಅದ್ಭುತವಾದ ಕಾವ್ಯ. ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಇಂತಹ ಕೃತಿಗಳು ಬರಬೇಕು ಎಂದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು