ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾ..? : ಕೃಷ್ಣ ಬೈರೇಗೌಡ ಟೀಕೆ

P

Peepal Media Desk • ರಾಜಕೀಯ

• 1 ನಿಮಿಷದ ಓದು

ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾ..? : ಕೃಷ್ಣ ಬೈರೇಗೌಡ ಟೀಕೆ

• ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಒತ್ತಾಯ
• ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಸಹಮತ

ಬೆಳಗಾವಿ ಡಿಸೆಂಬರ್ 09 : ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಟೀಕಿಸಿದರು.

ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ ಆರಂಭವಾಗಬೇಕಿತ್ತು. ಆದರೆ, ವಿಪಕ್ಷ ನಾಯಕರಾದ ಆರ್. ಅಶೋಕ್ ಹಾಗೂ ಶಾಸಕರಾದ ಅಶ್ವತ್ಥ ನಾರಾಯಣ ಅವರು ಪ್ರಶ್ನೋತ್ತರ ಅವಧಿಗೆ ಮುನ್ನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ನಿಲುವಳಿ ಮಂಡಿಸಿದರು.

ಈ ವೇಳೆ ವಿರೋಧ ಪಕ್ಷದ ನಾಯಕರ ವರ್ತನೆಯನ್ನು ಬಹಿರಂಗವಾಗಿ ಖಂಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾಗಿದೆ. ಅದೇ ಕಾರಣಕ್ಕೆ ಪ್ರಶ್ನೋತ್ತರ ಅವಧಿಗೆ ಮುನ್ನವೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎನ್ನುತ್ತಿದ್ದಾರೆ. ಆದರೆ, ನಿಯಮದ ಪ್ರಕಾರ ಪ್ರಶ್ನೋತ್ತರ ಅವಧಿಗೆ ಮುನ್ನ ಯಾವುದೇ ಚರ್ಚೆ ಮಾಡಲು ಅವಕಾಶ ಇಲ್ಲ. ಪ್ರಶ್ನೋತ್ತರ ಅವಧಿಯ ನಂತರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರವೇ ಸಲಹೆ ನೀಡಿದೆ. ಆದರೂ, ಇದರಲ್ಲಿ ವಿರೋಧ ಪಕ್ಷದ ತಕರಾರು ಏಕೆ?” ಎಂದು ಟೀಕಾಪ್ರಹಾರ ನಡೆಸಿದರು.

ಈ ವೇಳೆ ಸದನದ ಈ ಹಿಂದಿನ ಇತಿಹಾಸವನ್ನೂ ಮೆಲುಕು ಹಾಕಿದ ಅವರು,” ಬಿಜೆಪಿ ನಾಯಕರಲ್ಲಿ ಸೆಲೆಕ್ಟೀವ್ ಜ್ಞಾಪಕ ಶಕ್ತಿ ಅಧಿಕವಾಗಿದೆ. ಈ ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗ ವಿಶ್ವೇಶ್ವರ ಹೆಗಡೆ ಅವರು ಸ್ಪೀಕರ್ ಆಗಿದ್ದ ಸಂದರ್ಭದಲ್ಲಿ ʼಪ್ರಶ್ನೋತ್ತರದ ಅವಧಿ ವೇಳೆ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಬೇಡʼ ಎಂದು ಅವರೇ ಹೇಳಿದ್ದರು. ಆದರೆ, ಇಂದು ಬಿಜೆಪಿ ನಾಯಕರೇ ಈ ನಿಯಮವನ್ನು ಗಾಳಿಗೆ ತೂರುತ್ತಿರುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಉಚ್ಛಾಟಿತ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, “ಕೆಲವರು ಪ್ರತಿಷ್ಠೆಗಾಗಿ ಪ್ರಶ್ನೋತ್ತರ ಅವಧಿ ಮುಂದೆ ಹಾಕುವುದು ಸರಿ ಇಲ್ಲ. ಪ್ರತಿಯೊಬ್ಬ  ಶಾಸಕರಿಗೂ ಅವರವರ ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯೇ ಮಹತ್ವದ ಪ್ರಶ್ನೆ ಇರುತ್ತೆದೆ. ನಾನೂ ಸಹ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸ್ಟಾರ್ ಗುರುತಿನ ಪ್ರಶ್ನೆ ಕೇಳಿದ್ದೇನೆ. ಇಂತಹ ಸಂದರ್ಭದಲ್ಲಿ ಪ್ರಶ್ನೋತ್ತರ ಅವಧಿಯನ್ನು ಮುಂದೂಡುವುದು ಸರಿಯಲ್ಲ. ಪ್ರಶ್ನೋತ್ತರ ಅವಧಿಯ ನಂತರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ” ಎಂದು ಸಲಹೆ ನೀಡಿದರು.

ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್ ಮಾತನಾಡಿ, “ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ನಮ್ಮ ಸಹಮತ ಇದೆ. ಈ ಚರ್ಚೆಯನ್ನು ಈಗಾಗಲೇ ಇಂದಿನ ಅಜೆಂಡಾಗೂ ಸೇರಿಸಿಯಾಗಿದೆ. ಪ್ರಶ್ನೋತ್ತರ ಅವಧಿಗೆ ಮುನ್ನ ಈ ಚರ್ಚೆ ಆರಂಭಿಸಲು ನಮ್ಮದೇನು ತಕರಾರು ಇಲ್ಲ. ಆ ನಿರ್ಧಾರ ಸ್ಪೀಕರ್ ಅವರ ವಿವೇಚನೆಗೆ ಬಿಟ್ಟದ್ದು” ಎಂದು ವಿಪಕ್ಷ ನಾಯಕರ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದರು.

ಅಂತಿಮವಾಗಿ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರಶ್ನೋತ್ತರ ಅವಧಿಗೆ ಮನ್ನಣೆ ನೀಡಿದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version