ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜನಾರ್ದನರೆಡ್ಡಿ ಜುಜುಬಿ ರಾಜಕಾರಣಿ: ನಾಚಿಕೆ, ಮಾನ ಮರ್ಯಾದೆ ಇಲ್ಲ. ನಿಮ್ಮ ಅಟ್ಟಹಾಸ ಮುರಿದದ್ದು ನಾನು: ರೆಡ್ಡಿಗೆ ನೇರ ಎಚ್ಚರಿಕೆ ಕೊಟ್ಟ ಸಿ ಎಂ ಸಿದ್ದರಾಮಯ್ಯ

ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ: ಸಿ.ಎಂ ಎಚ್ಚರಿಕೆ

PPeepal Media

Peepal Media • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಜನಾರ್ದನರೆಡ್ಡಿ ಜುಜುಬಿ ರಾಜಕಾರಣಿ: ನಾಚಿಕೆ, ಮಾನ ಮರ್ಯಾದೆ ಇಲ್ಲ. ನಿಮ್ಮ ಅಟ್ಟಹಾಸ ಮುರಿದದ್ದು ನಾನು: ರೆಡ್ಡಿಗೆ ನೇರ ಎಚ್ಚರಿಕೆ ಕೊಟ್ಟ ಸಿ ಎಂ ಸಿದ್ದರಾಮಯ್ಯ

ಸಂಡೂರು ನ 9: ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ. ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯನ್ನು ಭಯಮುಕ್ತ ಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದನ್ನು ಮರೀಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರಾ ನೇರಾ ಬಹಿರಂಗವಾಗಿ ಎಚ್ಚರಿಕೆ ನೀಡಿದರು.

ಸಂಡೂರಿನ ವಿಠಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರ ಪರವಾಗಿ ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಜನಾರ್ದನರೆಡ್ಡಿಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು.

ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು ? ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಗೆದ್ರಿ. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ಇರಬಾರದಾ? ನಮ್ಮ ಸರ್ಕಾರ ಇದೆ. ಯಡಿಯೂರಪ್ಪ ಅವರು, ನೀವು ಮಾತನಾಡುತ್ತಿಲ್ಲವಾ ? ನಿಮ್ಮ ಸರ್ಕಾರ ಇದ್ದಾಗ ನನಗೆ ಬಳ್ಳಾರಿಯಲ್ಲಿ ಮಾತನಾಡಲು ಜಾಗ ಕೊಟ್ಟಿರಲಿಲ್ಲ. ನನಗೆ ಕುಡಿಯೋದಕ್ಕೆ ನೀರು ಕೇಳಿದ್ರೂ ಜನ ನೀರು ಕೊಡೋಕೂ ಭಯ ಪಡ್ತಾ ಇದ್ರು. ನಮ್ಮ ಯಜಮಾನರಾದ ಬಳ್ಳಾರಿ ಜನರನ್ನು ಇಷ್ಟು ಭಯದಲ್ಲಿ ಇಟ್ಟಿದ್ರಲ್ಲಾ , ಯಾವ ಮುಖ ಹೊತ್ತುಕೊಂಡು ಇದೇ ಜನರ ಬಳಿ ಮತ ಕೇಳಲು ಬಂದಿದ್ದೀರಿ? ನಾಚಿಕೆ ಆಗೋದಿಲ್ವಾ ನಿಮಗೆ ಎಂದು ಖಾರವಾಗಿ ಪ್ರಶ್ನಿಸಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು