ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆಪರೇಷನ್‌ ಹಸ್ತ: ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದು, ಜ.26ರ ನಂತರ ಮುಂದಿನ ಪ್ರಕ್ರಿಯೆ ಆರಂಭಿಸುತ್ತೇವೆ – ಮಾಜಿ ಡಿಸಿಎಂ ಲಕ್ಷ್ಮಣ ಸವದಿ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಆಪರೇಷನ್‌ ಹಸ್ತ: ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದು, ಜ.26ರ ನಂತರ ಮುಂದಿನ ಪ್ರಕ್ರಿಯೆ ಆರಂಭಿಸುತ್ತೇವೆ – ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಬಾಗಲಕೋಟೆ: ಹಲವು ಅತೃಪ್ತ ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೋಮವಾರ ಹೇಳಿದ್ದಾರೆ.

“ನಾವು ಜನವರಿ 26ರ ನಂತರ ಮುಂದಿನ ಪ್ರಕ್ರಿಯೆಗಳನ್ನು ಪ್ರಾರಂಭಿಸುತ್ತೇವೆ. ಎಷ್ಟು ಮಂದಿ ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬುದನ್ನು ನೀವು (ಮಾಧ್ಯಮ) ನೋಡಲಿದ್ದೀರಿ” ಎಂದು ಅವರು ಹೇಳಿದರು.

ಆಪರೇಷನ್ ಹಸ್ತ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ, ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಪುನರುಚ್ಚರಿಸಿದರು.

“ಅವರ ಸೇರ್ಪಡೆ ಪ್ರಕ್ರಿಯೆ ಪೂರ್ಣಗೊಂಡ ನಂತರ, ಸೂಕ್ತ ಹುದ್ದೆಗಳನ್ನು ಅವರಿಗೆ ನೀಡಲಾಗುವುದು” ಎಂದು ಅವರು ಹೇಳಿದರು.

ಬಿಜೆಪಿಯಿಂದ ಬಂದವರಿಗೆ ಅನ್ಯಾಯ ಆಗಬಾರದು. ಹಾಗಾಗಿ ತಮ್ಮ ಇಚ್ಛೆಯಂತೆ ಕಾಂಗ್ರೆಸ್‌ಗೆ ಸೇರುವವರನ್ನು ಗೌರವಯುತವಾಗಿ ಸ್ವಾಗತಿಸಲಾಗುವುದು. ಸಂಸತ್ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಲು ನೀಲನಕ್ಷೆ ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಲಿಂಗಾಯತ ಸಮುದಾಯದ ಶಾಸಕರನ್ನು ಸೆಳೆಯುವ ಕಾರ್ಯವನ್ನು ನಿಮಗೆ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, ಲಿಂಗಾಯತರು ಮಾತ್ರವಲ್ಲದೆ ಕಾಂಗ್ರೆಸ್ ಎಲ್ಲರನ್ನು ಸ್ವಾಗತಿಸುತ್ತದೆ ಎಂದು ಶಾಸಕ ಸವದಿ ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸವದಿ, ಲಿಂಗಾಯತರು ಹೆಚ್ಚು ಉತ್ತರ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ, ವಿಜಯೇಂದ್ರ ಕೇವಲ ದಕ್ಷಿಣ ಕರ್ನಾಟಕದ ಮೈಸೂರು, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತನಾಗಿರುವ ನಾಯಕ ಎಂದು ವಿವರಿಸಿದರು.

”ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಪಕ್ಷದ ನಿರ್ಧಾರವನ್ನು ಹಲವು ನಾಯಕರು ಅನುಮೋದಿಸಿಲ್ಲ. ವಿಜಯೇಂದ್ರ ಅವರಂತಹ ಕಿರಿಯ ನಾಯಕನ ಕೈಕೆಳಗೆ ಕೆಲಸ ಮಾಡುವುದು ಹೇಗೆ ಎಂಬ ಗೊಂದಲದಲ್ಲಿ ಹಿರಿಯ ನಾಯಕರು ಇದ್ದಾರೆ. ನಾನು ಹೆಸರುಗಳನ್ನು ಈಗ ಹೇಳಬಯಸುವುದಿಲ್ಲ” ಎಂದು ಸವದಿ ಹೇಳಿದರು.

“ನಾನು ಬಿಜೆಪಿ ಪಕ್ಷದ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ವಿಜಯೇಂದ್ರ ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಗೆ ಲಾಭವಿಲ್ಲ. ರಾಜ್ಯಾಧ್ಯಕ್ಷರು ಯಾರೇ ಆಗಲಿ, ಬಿಜೆಪಿ ತಾನು ಕಳೆದುಕೊಂಡ ನೆಲೆಯನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ವಿಜಯೇಂದ್ರ ಅವರ ನೇಮಕದ ಬಗ್ಗೆ ಅನೇಕ ನಾಯಕರು ಕೋಪದಿಂದ ಕುದಿಯುತ್ತಿದ್ದಾರೆ ಮತ್ತು ಅವರ ಆಕ್ರೋಶ ಯಾವಾ ಕ್ಷಣದಲ್ಲೂ ಸ್ಫೋಟಗೊಳ್ಳಬಹುದು” ಎಂದು ಅವರು ಅಭಿಪ್ರಾಯಪಟ್ಟರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು