ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಲ್ಲಿಕಾರ್ಜುನ ಖರ್ಗೆಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಮಲ್ಲಿಕಾರ್ಜುನ ಖರ್ಗೆಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್

ದೆಹಲಿ ಸರ್ಕಾರದ ಮೇಲಿನ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಭಿಪ್ರಾಯ ದಾಖಲಿಸಿದ್ದಾರೆ. ಆ ಮೂಲಕ ಆಡಳಿತಾತ್ಮಕವಾಗಿ ರಾಜ್ಯ ಸರ್ಕಾರಗಳ ಮೇಲಿನ ‌ಹಸ್ತಕ್ಷೇಪ ಸರಿಯಲ್ಲ ಎಂದು ಹೇಳಿದ್ದಾರೆ.

“ಬಿಜೆಪಿ ಸರ್ಕಾರದ ‌ಸರ್ವಾಧಿಕಾರಿ ನಡೆಗೆ, ದೆಹಲಿ ಸರ್ಕಾರದ ಮೇಲೆ ಹೇರುತ್ತಿರುವ ಸುಗ್ರೀವಾಜ್ಞೆ ಸ್ಪಷ್ಟ ಸಾಕ್ಷಿಯಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಹೊಡೆತ ಬಿದ್ದರೆ, ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಕೆಲಸ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನ ಮತ್ತು ದೇಶಕ್ಕಿಂತ ಯಾವುದೇ ವ್ಯಕ್ತಿ ಅಥವಾ ಯಾವುದೇ ಪಕ್ಷ ದೊಡ್ಡದಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.

ಇತ್ತ ಬೆಂಗಳೂರಿನಲ್ಲಿ ನಡೆಯುತ್ತಿರುವ ತೃತೀಯ ರಂಗ ಮತ್ತು UPA ಮೈತ್ರಿಕೂಟದ ಸಭೆಗೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭಾಗವಹಿಸಿ ಒಕ್ಕೂಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಹಾಗೆಯೇ ದೆಹಲಿ ಸರ್ಕಾರದ ಪರವಾಗಿ ತಮ್ಮ ಅಭಿಪ್ರಾಯ ದಾಖಲಿಸಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಧನ್ಯವಾದ ತಿಳಿಸಿದ್ದಾರೆ. “ದೆಹಲಿಯ ಜನರ ಪರವಾಗಿ ನಿಂತಿದ್ದಕ್ಕಾಗಿ ಖರ್ಗೆ ಜೀ ಅವರಿಗೆ ಧನ್ಯವಾದಗಳು. ಈ ಸುಗ್ರೀವಾಜ್ಞೆಯು ಭಾರತ ವಿರೋಧಿ ಮತ್ತು ರಾಷ್ಟ್ರವಿರೋಧಿಯಾಗಿದೆ. ಇದರ ಬಗ್ಗೆ ಎಲ್ಲರೂ ದನಿಗೂಡಿಸಬೇಕಿದೆ” ಎಂಬುದಾಗಿ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು