ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಮುದ್ರೆ: ಚುನಾವಣಾಧಿಕಾರಿ ಕ್ರಮಕ್ಕೆ ಸಿಪಿಎಂ ತೀವ್ರ ಟೀಕೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಮುದ್ರೆ: ಚುನಾವಣಾಧಿಕಾರಿ ಕ್ರಮಕ್ಕೆ ಸಿಪಿಎಂ ತೀವ್ರ ಟೀಕೆ

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ಅಲ್ಲಿನ ಚುನಾವಣಾ ಆಯೋಗದ ಕ್ರಮವೊಂದು ಭಾರಿ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಜಾರಿಗೊಳಿಸಿದ ಅಧಿಕೃತ ಪತ್ರವೊಂದರಲ್ಲಿ ಬಿಜೆಪಿ ಪಕ್ಷದ ಮುದ್ರೆ (Seal) ಕಂಡುಬಂದಿರುವುದು ಸಂಚಲನ ಮೂಡಿಸಿದೆ.

ಕೇಂದ್ರ ಚುನಾವಣಾ ಆಯೋಗವು 2019ರ ಚುನಾವಣಾ ಮಾರ್ಗಸೂಚಿಗಳಿಗೆ ಸಂಬಂಧಿಸಿದ ಪತ್ರವೊಂದನ್ನು ಇತ್ತೀಚೆಗೆ ಕೇರಳದ ರಾಜಕೀಯ ಪಕ್ಷಗಳಿಗೆ ವಿತರಿಸಿತ್ತು. ರಾಜಕೀಯ ಪಕ್ಷಗಳ ಪ್ರಚಾರ ಮತ್ತು ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಈ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಆದರೆ, ಈ ಸರ್ಕಾರಿ ಪತ್ರದ ಮೇಲೆ ಬಿಜೆಪಿ ಪಕ್ಷದ ಸೀಲು ಇರುವುದು ಕಂಡುಬಂದಿದೆ.

ಈ ಪತ್ರದ ಫೋಟೋವನ್ನು ಸಿಪಿಎಂ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. “ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವೆ ಒಳಸಂಚು ನಡೆದಿದೆ ಎಂಬ ಆರೋಪಗಳು ಮೊದಲೇ ಇದ್ದವು, ಈಗ ಆಯೋಗದ ಪತ್ರದ ಮೇಲೆಯೇ ಬಿಜೆಪಿ ಸೀಲು ಇರುವುದು ಅನುಮಾನಗಳನ್ನು ಪುಷ್ಠೀಕರಿಸುತ್ತಿದೆ. ಬಿಜೆಪಿ ಈಗ ತನ್ನೆಲ್ಲಾ ನಾಟಕಗಳನ್ನು ಬಿಟ್ಟು ಬಹಿರಂಗವಾಗಿ ಆಯೋಗವನ್ನು ಬಳಸಿಕೊಳ್ಳುತ್ತಿದೆಯೇ?” ಎಂದು ಸಿಪಿಎಂ ಪ್ರಶ್ನಿಸಿದೆ.

ಈ ವಿವಾದದ ಬಗ್ಗೆ ಕೇರಳದ ಮುಖ್ಯ ಚುನಾವಣಾಧಿಕಾರಿ (CEO) ರತನ್ ಯು. ಕೇಲ್ಕರ್ ಪ್ರತಿಕ್ರಿಯಿಸಿದ್ದಾರೆ. ಇದೊಂದು “ಕ್ಲರಿಕಲ್ ತಪ್ಪು” (ಕಚೇರಿ ಮಟ್ಟದ ಗುಮಾಸ್ತರ ತಪ್ಪು) ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. “ಬಿಜೆಪಿಯ ಕೇರಳ ಘಟಕವು ಚುನಾವಣಾ ಮಾರ್ಗಸೂಚಿಗಳ ಬಗ್ಗೆ ವಿವರಣೆ ಕೋರಿ ನಮ್ಮ ಕಚೇರಿಗೆ ಭೇಟಿ ನೀಡಿತ್ತು. ಆ ಸಮಯದಲ್ಲಿ ಅವರು ಸಲ್ಲಿಸಿದ ಅರ್ಜಿಯೊಂದಿಗೆ ಲಗತ್ತಿಸಿದ್ದ ಇಸಿಐ ಪತ್ರದ ಪ್ರತಿಯಲ್ಲಿ ಬಿಜೆಪಿ ಮುದ್ರೆ ಇತ್ತು. ಅದನ್ನೇ ನಮ್ಮ ಸಿಬ್ಬಂದಿ ಅಚಾತುರ್ಯದಿಂದ ಇತರ ರಾಜಕೀಯ ಪಕ್ಷಗಳಿಗೂ ವಿತರಿಸಿದ್ದಾರೆ,” ಎಂದು ಕೇಲ್ಕರ್ ವಿವರಣೆ ನೀಡಿದ್ದಾರೆ.

ಕೇರಳದಲ್ಲಿ ಸೋಮವಾರದಂದು ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ಈ ಮುದ್ರೆ ವಿವಾದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು