ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BJP ಒಳಜಗಳ | ಪ್ರಭು ಚವಾಣ್ ವಿರುದ್ಧ 100 ಕೋಟಿ ಮಾನಹಾನಿ ಮೊಕದ್ದಮೆ: ಸಚಿವ ಭಗವಂತ ಖೂಬಾ

P

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

BJP ಒಳಜಗಳ | ಪ್ರಭು ಚವಾಣ್ ವಿರುದ್ಧ 100 ಕೋಟಿ ಮಾನಹಾನಿ ಮೊಕದ್ದಮೆ: ಸಚಿವ ಭಗವಂತ ಖೂಬಾ

ಬೀದರ್ : ಶಾಸಕ ಪ್ರಭು ಚವ್ಹಾಣ್ ನನ್ನ ವಿರುದ್ಧ ಸಾರ್ವಜನಿಕವಾಗಿ ಗಂಭೀರ ಆರೋಪ ಮಾಡಿದ್ದು, ಇದರಿಂದ ನನಗೆ ಆಘಾತವಾಗಿದೆ. ಇದರ ಬಗ್ಗೆ ಸಾರ್ವಜನಿಕವಾಗಿ ಉತ್ತರಿಸಿ ಪಕ್ಷಕ್ಕೆ ಮುಜುಗರ ತರುವುದಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಈಚೆಗೆ ಬಿಜೆಪಿಯ ಕಾರ್ಯಕಾರಿಣಿಸಭೆಯಲ್ಲಿ ಮಾತನಾಡಿದ ಅವರು, ವರಿಷ್ಠರು ಅನುಮತಿ ನೀಡಿದರೆ ಚವ್ಹಾಣ್ ವಿರುದ್ಧ 100 ಕೋಟಿ ರು.ಗಳ ಮಾನಹಾನಿ ಮೊಕದ್ದಮೆ ಹೂಡುವ ವಿಚಾರ ಮಾಡಿದ್ದು, ತಮ್ಮ ಕ್ಷೇತ್ರಕ್ಕೆ ಉಪಚುನಾವಣೆ ಮಾಡಿಸುವ ಮತ್ತು ಅದಕ್ಕಾಗಿ ನನ್ನನ್ನು ರಸ್ತೆಯಲ್ಲಿ ಗುಂಡು ಹಾರಿಸಿ ಕೊಲೆ ಮಾಡುವ ಮಾತು ಭಗವಂತ ಖೂಬಾ ಆಡಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ಖೂಬಾ, ಬಿಜೆಪಿ ಶಿಸ್ತಿನ ಪಕ್ಷ, ಒಂದೆಡೆ ಕುಳಿತು ಸಮಸ್ಯೆ ಬಗೆಹರಿಯುತ್ತೆ ಎಂದು ನಂಬಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡುವುದಾಗಲಿ, ಅವರ ಮೇಲೆ ಆರೋಪ ಮಾಡುವುದಾಗಲಿ ಮಾಡಲಿಲ್ಲ. ಕೇಂದ್ರ ಮತ್ತು ರಾಜ್ಯದ ವರಿಷ್ಠರ ಗಮನಕ್ಕೆ ಈ ವಿಷಯ ಬಂದಿದೆ. ವರಿಷ್ಠರು ನನಗೆ ಕರೆ ಮಾಡಿ ಸಮಾಧಾನ ಮಾಡಿದ್ದು, ನಾನು ವರಿಷ್ಠರ ಗಮನಕ್ಕೆ ಎಲ್ಲವನ್ನೂ ತಂದಿದ್ದೇನೆ ಎಂದು ವಿವರಿಸಿದರು.

ಚವ್ಹಾಣ್‌ರನ್ನು ಕರೆಸಿ ಮಾತನಾಡಿ, ಸಮಾಧಾನದ ಉತ್ತರ ಕೊಡಿಸುವ ಭರವಸೆ ನೀಡಿದ್ದು, ಒಂದು ವೇಳೆ ನನಗೆ ಸಮಾಧಾನ ಆಗದಿದ್ದಲ್ಲಿ, ವರಿಷ್ಠರು ಅನುಮತಿ ನೀಡಿದಲ್ಲಿ ಅವರ ಮೇಲೆ 100 ಕೋಟಿ ರು.ಗಳ ಮಾನಹಾನಿ ಮೊಕದ್ದಮೆ ಹೂಡುವ ವಿಚಾರ ಮಾಡಿದ್ದೇನೆ ಎಂದು ಸೂಚಿಸಿದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version