ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲಂಚದಲ್ಲೇ ಮುಳುಗೇಳುತ್ತಿದ್ದ ಕುಮಾರಸ್ವಾಮಿಗೆ ಎಲ್ಲೆಡೆಯೂ ಲಂಚವೇ ಕಾಣುತ್ತದೆ: ಸಿದ್ಧರಾಮಯ್ಯ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಲಂಚದಲ್ಲೇ ಮುಳುಗೇಳುತ್ತಿದ್ದ ಕುಮಾರಸ್ವಾಮಿಗೆ ಎಲ್ಲೆಡೆಯೂ ಲಂಚವೇ ಕಾಣುತ್ತದೆ: ಸಿದ್ಧರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತನ್ನ ಮಗನ ವಿರುದ್ಧ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು, ಈ ಆರೋಪಗಳಲ್ಲಿ ಹುರುಳಿಲ್ಲ ಎಂದಿದ್ದಾರೆ.

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ ಎಂದು ಅವರು ಹೇಳಿದ್ದಾರೆ

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ.

“ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.
ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ.” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು