ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಗ್ರರ ದಾಳಿ – ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ : ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk ಮೀಡಿಯಾ, ರಾಜಕೀಯ

• 1 ನಿಮಿಷದ ಓದು

ಉಗ್ರರ ದಾಳಿ – ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 23 : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ  ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.


ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು