ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಮೀನಿನ ಮೌಲ್ಯ ಪರಿಷ್ಕರಣೆ ಸರ್ಕಾರ ಚಿಂತನೆ : ಸಚಿವ ಕೃಷ್ಣಭೈರೇಗೌಡ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಜಮೀನಿನ ಮೌಲ್ಯ ಪರಿಷ್ಕರಣೆ ಸರ್ಕಾರ ಚಿಂತನೆ : ಸಚಿವ ಕೃಷ್ಣಭೈರೇಗೌಡ

ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಬದಲಾಗಿ ರೈತರಿಗಾಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ.

ಬುಧವಾರದ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರಾದ ಮುನಿರಾಜೇಗೌಡ ಅವರು, ಮುದ್ರಾಂಕ ಶುಲ್ಕ ಪರಿಷ್ಕರಣೆ ಬಗ್ಗೆ ಪ್ರಶ್ನಿಸಿದಾಗ ಸಚಿವರಾದ ಕೃಷ್ಣಬೈರೇಗೌಡ ಈ ರೀತಿಯಾಗಿ ಉತ್ತರಿಸಿದರು.

“ಮುದ್ರಾಂಕ ಶುಲ್ಕವನ್ನು ಪರಿಷ್ಕರಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ಆಲೋಚನೆ ಇಲ್ಲ. ಆದರೆ ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಟ ನಾಲ್ಕು ವರ್ಷವಾಗಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು” ಎಂದು ಉತ್ತರಿಸಿದರು.

ಮುಂದುವರೆದು, “ಜಮೀನಿನ ಮೌಲ್ಯ ಪರಿಷ್ಕರಣೆಯ ಆಧಾರದಲ್ಲಿ ರೈತರ ಭೂಮಿಗಳಿಗೆ ಮಾರುಕಟ್ಟೆ ಮೌಲ್ಯ ನಿಗದಿಯಾಗುತ್ತದೆ‌. ಆದರೆ, ಕಳೆದ ನಾಲ್ಕು ವರ್ಷದಿಂದ ಮೌಲ್ಯ ಪರಿಷ್ಕರಣೆಯಾಗದ ಕಾರಣ ರೈತರಿಗೆ ಅನ್ಯಾಯವಾಗುತ್ತಿದೆ. ರೈತರು ಜಮೀನು ಮಾರಾಟಕ್ಕೆ ಮುಂದಾಗುವಾಗ ಅವರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಅಲ್ಲದೆ, ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಹಣ ವಹಿವಾಟು ಅಧಿಕವಾಗಿದ್ದು ಕಪ್ಪು ಹಣ ಪರಿವರ್ತನೆಗೂ ಕಾರಣವಾಗಿದೆ. ಹೀಗಾಗಿ ಜಮೀನಿನ ಮೌಲ್ಯವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಇದೇ ಸಂದರ್ಭದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದೂ ಪರಿಷತ್ ಸದಸ್ಯ ಮುನಿರಾಜೇಗೌಡ ಸದನದ ಗಮನ ಸೆಳೆದರು.

ಈ ಪ್ರಶ್ನೆಗೂ ಸೂಕ್ತ ಉತ್ತರ ನೀಡಿದ ಸಚಿವರು, ” ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಅಧಿಕ ಸಂಖ್ಯೆಯಲ್ಲಿ ಜನ ಬರುವ ಕಾರಣ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಆದರೆ ಮುಂದಿನ ಒಂದು ವರ್ಷದಲ್ಲಿ ಎಲ್ಲ ಕಚೇರಿಗಳಲ್ಲೂ ಉತ್ತಮ ಜನಸ್ನೇಹಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪಾಸ್‌ಪೋರ್ಟ್ ಕಚೇರಿಗಳ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲೂ ಉತ್ತಮ ಮೂಲಭೂತ ಸೌಲಭ್ಯ ನೀಡಲಾಗುವುದು” ಎಂದು ಭರವಸೆ ನೀಡಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು