ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂವಿಧಾನ ಪೀಠಿಕೆಯಿಂದ ‘ಜಾತ್ಯಾತೀತ ಮತ್ತು ಸಮಾಜವಾದ’ ಪದ ಕಿತ್ತು ಹಾಕುವ ವಿವಾದ; ಮೋದಿ ಅಭಿಪ್ರಾಯವೂ ಹೊರಬರಲಿ : ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk • ದೇಶ, ರಾಜಕೀಯ, ರಾಜ್ಯ

• 2 ನಿಮಿಷದ ಓದು

ಸಂವಿಧಾನ ಪೀಠಿಕೆಯಿಂದ ‘ಜಾತ್ಯಾತೀತ ಮತ್ತು ಸಮಾಜವಾದ’ ಪದ ಕಿತ್ತು ಹಾಕುವ ವಿವಾದ; ಮೋದಿ ಅಭಿಪ್ರಾಯವೂ ಹೊರಬರಲಿ : ಸಿಎಂ ಸಿದ್ದರಾಮಯ್ಯ

“ಸಂವಿಧಾನದ ಪೀಠಿಕೆಯಿಂದ ‘’ಸಮಾಜವಾದಿ’’ ಮತ್ತು “ಜಾತ್ಯತೀತ” ಪದಗಳನ್ನು ಕಿತ್ತುಹಾಕಬೇಕೆಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿರುವುದು ಗಂಭೀರವಾಗಿ ಚರ್ಚೆ ನಡೆಯಬೇಕಾಗಿರುವ ಸಂಗತಿ. ಆಡಳಿತಾರೂಢ ಬಿಜೆಪಿಯ ‘’ಹೈಕಮಾಂಡ್” ನಿಂದಲೇ ಈ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕೆಂದು 140 ಕೋಟಿ ಜನರ ಪರವಾಗಿ ನಾನು ಪ್ರಧಾನಿ ಅವರನ್ನು ಆಗ್ರಹಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯ 50 ನೇ ವಾರ್ಷಿಕೋತ್ಸವವನ್ನು ಗುರುತಿಸಲು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ “ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಪರಿಶೀಲಿಸಬೇಕು” ಎಂಬ ಅಂಶ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಎಸ್ಎಸ್ ಅಭಿಪ್ರಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತನ್ನ ಮೌನ ಮುರಿದು ಮಾತನಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಭಾರತ ಸಮಾಜವಾದಿ ಮತ್ತು ಜಾತ್ಯತೀತ ದೇಶ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದ ಕಾರಣ ಸಂವಿಧಾನದ ಮೂಲಪೀಠಿಕೆಯಲ್ಲಿ ಈ ಪದಗಳನ್ನು ಪ್ರತ್ಯೇಕವಾಗಿ ಸೇರಿಸುವ ಅಗತ್ಯ ಪ್ರಾರಂಭದ ದಿನಗಳಲ್ಲಿ ಬರಲಿಲ್ಲ. ಆದರೆ ನಂತರದ ದಿನಗಳಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯಗಳಾದ ಜಾತ್ಯತೀತತೆ ಮತ್ತು ಸಮಾಜವಾದದ ಮೇಲೆಯೇ ಆರ್ ಎಸ್ ಎಸ್ ಮತ್ತು ಜನಸಂಘಗಳು ದಾಳಿ ಮಾಡಲು ಶುರುಮಾಡಿದಾಗ ಪ್ರಧಾನಿ ಇಂದಿರಾ ಗಾಂಧಿಯವರು 42ನೇ ತಿದ್ದುಪಡಿ ಮೂಲಕ ಈ ಪದಗಳನ್ನು ಸೇರಿಸಬೇಕಾಯಿತು ಎನ್ನುವುದನ್ನು ಇಡೀ ದೇಶ ಇಂದು ಒಪ್ಪಿಕೊಂಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನೆಲದ ಮೇಲೆ ಆರ್ಎಸ್ಎಸ್ ನಡೆಸಿದ ಸಾಂಸ್ಕೃತಿಕ ದಾಳಿಯ ಬಗ್ಗೆ ಪ್ರಸ್ತಾಪಿಸಿ ಹೇಳಿದ್ದಾರೆ.

“ಸಂವಿಧಾನವನ್ನು ಆರ್ ಎಸ್ ಎಸ್ ವಿರೋಧಿಸುತ್ತಿರುವುದು ಹೊಸ ಬೆಳವಣಿಗೆಯೇನಲ್ಲ. ಭಾರತೀಯ ಜನತಾಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ ಎಸ್ ಎಸ್  ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ್ದ ನಾಲ್ಕೇ ದಿನಕ್ಕೆ ಅದನ್ನು ವಿರೋಧಿಸಿ ಆರ್ ಎಸ್ ಎಸ್ ಮುಖವಾಣಿ  ಆರ್ಗನೈಸರ್ ಪತ್ರಿಕೆ ಸಂಪಾದಕೀಯವನ್ನು ಬರೆದಿತ್ತು.
‘’ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಭಾರತೀಯತೆಯಾಗಲಿ, ಪುರಾತನ ಭಾರತದ ಕಟ್ಟುಕಟ್ಟಳೆಗಳಾಗಲಿ ಇಲ್ಲ, ಇದೇ ಈ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ’’  ಎಂದು ಆರ್ಗನೈಸರ್ ಪತ್ರಿಕೆ ಸಂಪಾದಕೀಯ ಬರೆದಿತ್ತು..
‘’ ಭಾರತದ ಸಂವಿಧಾನ ಎನ್ನುವುದು ಬೇರೆ ದೇಶಗಳ ಸಂವಿಧಾನದ ಕಲಮ್ ಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆ, ಅದರಲ್ಲಿ ಭಾರತೀಯತೆಯೇ ಇಲ್ಲ ಎಂದು ಎಂ.ಎಸ್. ಗೋಲ್ವಾಲ್ಕರ್ ಹೇಳಿದ್ದರು ಎಂದು ಸಿದ್ದರಾಮಯ್ಯ ಆರೆಸ್ಸೆಸ್ ಈ ಸಮಾಜದ ಮೇಲೆ ಹಂತಹಂತವಾಗಿ ನಡೆಸಿದ ಸಾಂಸ್ಕೃತಿಕ ದಾಳಿಯನ್ನು ಪ್ರಸ್ತಾಪಿಸಿ ಹೇಳಿದ್ದಾರೆ.

‘’ಮನುಸ್ಮೃತಿಯೇ ನಿಜವಾದ ಹಿಂದೂ ಕಾನೂನು, ಅದೇ ಹಿಂದೂಗಳ ಪೂಜನೀಯ ಗ್ರಂಥ. ಈ ಮನುಸ್ಮೃತಿಯ ಆಶಯಗಳು ಸಂವಿಧಾನದಲ್ಲಿ ಇಲ್ಲ” ಎಂದು  ವಿ.ಡಿ.ಸಾವರ್ಕರ್ ಹೇಳಿದ್ದರು. ನಮ್ಮ ಸಂವಿಧಾನದ ಬಗ್ಗೆ ಆರ್ ಎಸ್ ಎಸ್ ಮತ್ತು ಅದರ ನಾಯಕರು ಬಹಿರಂಗವಾಗಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಭಾರತೀಯ ಜನತಾ ಪಕ್ಷ ಇಲ್ಲಿಯ ವರೆಗೆ ತಿರಸ್ಕರಿಸಿಲ್ಲ. ಇದರ ಬದಲಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗೆಲ್ಲ ಒಂದೆಡೆ ಆರ್ ಎಸ್ ಎಸ್ ನಾಯಕರು ಮತ್ತು ಇನ್ನೊಂದೆಡೆ ಬಿಜೆಪಿಯ ಕೆಳಹಂತದ ನಾಯಕರು ಸಂವಿಧಾನ ಬದಲಾವಣೆಯ ಕೂಗು ಹಾಕುತ್ತಾ ‘’ಟೆಸ್ಟ್ ಡೋಸ್’’ ಕೊಡುತ್ತಾ ಜನರ ನಾಡಿ ಮಿಡಿತವನ್ನು ಪರೀಕ್ಷಿಸುವ ಪ್ರಯತ್ನ ಮಾಡುತ್ತಿರುತ್ತಾರೆ. ಬಿಜೆಪಿ ಈ ‘’ಕಳ್ಳಾಟ’’ವನ್ನು ದೇಶದ ಪ್ರಜ್ಞಾವಂತ ಜನ ಅರ್ಥಮಾಡಿಕೊಂಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನು ಬದಲಾಯಿಸುವುದಾಗಿ ಬಿಜೆಪಿ ಪಕ್ಷದ ಕೆಲವು ಕೂಗುಮಾರಿಗಳಿಂದ ಘೋಷಣೆ ಮಾಡಿಸಿದ್ದ ಬಿಜೆಪಿ ಅದಕ್ಕೆ ತಕ್ಕ ಉತ್ತರ ಪಡೆದಿದ್ದಾರೆ ಎಂದು ಭಾವಿಸುವೆ. ನಮ್ಮ ನಡುವಿನ ಒಂದಷ್ಟು ಜಾತ್ಯತೀತ ನಿಲುವಿನ ಪಕ್ಷಗಳು ಅಧಿಕಾರದ ಲಾಲಸೆಯಿಂದ ರಾಜಿ ಮಾಡಿಕೊಳ್ಳದೆ ಇದ್ದರೆ ಬಿಜೆಪಿ ಇಂದು ವಿರೋಧಪಕ್ಷದ ಸ್ಥಾನದಲ್ಲಿ ಕೂರಬೇಕಾಗಿತ್ತು. ಇದರ ನಂತರವೂ ಬಿಜೆಪಿ ತನ್ನ ಕುಟಿಲ ಪ್ರಯತ್ನವನ್ನು ಮುಂದುವರಿಸಿರುವುದು ವಿಷಾದನೀಯ. ಈಗಲೂ ಎಚ್ಚೆತ್ತುಕೊಳ್ಳದೆ ತಮ್ಮ ಕುಟಿಲ ಪ್ರಯತ್ನವನ್ನು ಹೀಗೆಯೇ ಮುಂದುವರಿಸಿದರೆ ದೇಶದ ಪ್ರಜಾಪ್ರಭುತ್ವಪ್ರೇಮಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಸಿದ್ದರಾಮಯ್ಯ ತಮ್ಮ ಜಾಲತಾಣದ ಮೂಲಕ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು