ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾರಾಷ್ಟ್ರ ಮಹಾಯುತಿ ಮೈತ್ರಿಯಲ್ಲಿ ಬಿರುಕು, ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಜಟಾಪಟಿ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಮಹಾರಾಷ್ಟ್ರ ಮಹಾಯುತಿ ಮೈತ್ರಿಯಲ್ಲಿ ಬಿರುಕು, ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಜಟಾಪಟಿ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ (ಬಿಜೆಪಿ, ಶಿವಸೇನೆ-ಶಿಂಧೆ ಬಣ, ಎನ್‌ಸಿಪಿ-ಅಜಿತ್ ಪವಾರ್ ಬಣ) ಸಮ್ಮಿಶ್ರ ಸರ್ಕಾರದಲ್ಲಿ ಹೋರಾಟ ಆರಂಭವಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಡುವೆ ಜಟಾಪಟಿ ನಡೆದಿದೆ. ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿ ಮೈತ್ರಿಕೂಟದಲ್ಲಿ ಅಜಿತ್ ಪವಾರ್ ನೇತೃತ್ವದ ಪಕ್ಷಗಳು ಕ್ಷೇತ್ರದಲ್ಲಿ ಹೆಚ್ಚಿನ ಬಲ ಹೊಂದಿರುವುದರಿಂದ ಹೆಚ್ಚಿನ ಸ್ಥಾನಗಳನ್ನು ಮೀಸಲಿಡುವಂತೆ ಒತ್ತಾಯಿಸುತ್ತಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಏಕನಾಥ್ ಶಿಂಧೆ ಬಣ ಒಟ್ಟಾಗಿ 22 ಸ್ಥಾನಗಳಿಗೆ ಒತ್ತಾಯಿಸುತ್ತಿದೆ. ಮತ್ತೊಂದೆಡೆ 11 ಸೀಟು ನೀಡಬೇಕು ಎಂದು ಅಜಿತ್ ಗುಂಪು ಒತ್ತಾಯಿಸುತ್ತಿದೆ. ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಅವರು ಕೇವಲ 15 ಸ್ಥಾನಗಳಲ್ಲಿ ಸ್ಪರ್ಧಿಸಬೇಕೇ? ಎಂದು ಕೇಳುವ ಮೂಲಕ ಎರಡೂ ಕಡೆಗೂ ಬಿಜೆಪಿ ಬಿಜೆಪಿ ಸಿಟ್ಟು ತೋರಿಸಿದೆ. ಮಿತ್ರಪಕ್ಷಗಳನ್ನು ಒಟ್ಟುಗೂಡಿಸುವುದು ಹೇಗೆಂದು ತಿಳಿಯದೆ ಬಿಜೆಪಿ ತಲೆ ಕೆರೆದುಕೊಳ್ಳುತ್ತಿದೆ.

ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ನಡುವೆ ಸೀಟು ಹಂಚಿಕೆ ಕುರಿತು ಇತ್ತೀಚೆಗೆ ನಡೆದ ಚರ್ಚೆಯಲ್ಲಿ ಶಿಂಧೆ ಬಣಕ್ಕೆ 22 ಸಂಸದ ಸ್ಥಾನಗಳನ್ನು ಹಂಚಿಕೆ ಮಾಡಬೇಕು ಎಂದು ಪಟ್ಟು ಹಿಡಿದಿರುವುದಾಗಿ ವರದಿಯಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ 18 ಸ್ಥಾನಗಳನ್ನು ಗೆದ್ದಿತ್ತು. ನಾಲ್ಕೂ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಹೀಗಾಗಿ ಅವರ ಶಕ್ತಿಗನುಗುಣವಾಗಿ ನಮಗೆ 22 ಸ್ಥಾನ ನೀಡಬೇಕು’ ಎಂದು ಶಿಂಧೆ ಬಣದ ಹಿರಿಯ ಮುಖಂಡರೊಬ್ಬರು ತಿಳಿಸಿದರು.

ಆದರೆ ಬಿಜೆಪಿ ನಾಯಕರು ಶಿಂಧೆ ಅವರ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ. ಶಿಂಧೆಗೆ 22 ಸೀಟು, ಅಜಿತ್ ಪವಾರ್ ಗೆ 11 ಸೀಟುಗಳನ್ನು ಮೀಸಲಿಟ್ಟರೆ ನಮಗೇನು ಉಳಿಯುತ್ತದೆ? 48 ಸ್ಥಾನಗಳಲ್ಲಿ 15? ಅದು ಹೇಗೆ ಸಾಧ್ಯ’ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದರು. ಏತನ್ಮಧ್ಯೆ, ಬಿಜೆಪಿ ನಾಯಕ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ, ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು