ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

PPeepal Media Desk

Peepal Media Desk ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಆರೋಪದಡಿ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.

ಮೈಸೂರು ನಿವಾಸಿಗಳಾದ ಕೆ.ಟಿ. ರಮೇಶ್ ಹಾಗೂ ಮನೋಜ್ ಕುಮಾರ್ ಅವರು ನೀಡಿರುವ ದೂರಿನ ಪ್ರಕಾರ, ಜುಲೈ 25ರಂದು ಪ್ರಸಾರವಾದ ‘ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ ಅರುಣ್ ಬಡಿಗೇರ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಸಂವಿಧಾನಬದ್ಧ ಮೀಸಲಾತಿ ವ್ಯವಸ್ಥೆಯನ್ನು ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ದೂರುದಾರರ ಪ್ರಕಾರ, ಕಾರ್ಯಕ್ರಮದ ವಿಡಿಯೋದಲ್ಲಿನ ನಿರ್ದಿಷ್ಟ ಭಾಗದಲ್ಲಿ ಅವರು ಮೀಸಲಾತಿ ಆಧಾರದಲ್ಲಿ ಶಿಕ್ಷಣ ಮತ್ತು ಉದ್ಯೋಗ ಪಡೆದವರ ಅರ್ಹತೆ ಹಾಗೂ ಸಾಮರ್ಥ್ಯವನ್ನು ಪ್ರಶ್ನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ಮೀಸಲಾತಿ ಪಡೆಯುವ ಸಮುದಾಯಗಳ ವಿರುದ್ಧ ಪೂರ್ವಾಗ್ರಹ ಮತ್ತು ದ್ವೇಷವನ್ನು ಹುಟ್ಟುಹಾಕುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಬಡಿಗೇರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಹಿಂದೆಯೂ ವಿವಾದಾತ್ಮಕ ಹೇಳಿಕೆಗಳ ಆರೋಪ
ಅರುಣ್ ಬಡಿಗೇರ್ ಅವರ ಹೇಳಿಕೆಗಳ ಕುರಿತು ಈ ಹಿಂದೆಯೂ ವಿವಾದಗಳು ಉಂಟಾಗಿದ್ದವು. 2022ರ ಫೆಬ್ರವರಿ 3ರಂದು ಹಿಜಾಬ್ ವಿವಾದ ತಾರಕಕ್ಕೇರಿದ್ದ ಸಂದರ್ಭದಲ್ಲಿ ಪ್ರಸಾರವಾದ ‘ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ “ಇದು ಭಾರತ, ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ” ಎಂಬ ಹೇಳಿಕೆ ನೀಡಿದ್ದರೆಂದು ಆರೋಪಿಸಿ ದೂರು ದಾಖಲಿಸಲಾಗಿತ್ತು. ಆ ದೂರಿನ ಸಂಬಂಧ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶ ನೀಡಿದ್ದ ಪ್ರಕರಣವೂ ಗಮನ ಸೆಳೆದಿತ್ತು.

ಇದೇ ರೀತಿ, 2022ರ ಮಾರ್ಚ್‌ನಲ್ಲಿ ಪ್ರಸಾರವಾದ ನೇರ ಫೋನ್-ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವೀಕ್ಷಕರೊಂದಿಗೆ ನಡೆದ ಸಂಭಾಷಣೆಯ ವೇಳೆ, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕೊಲೆ ಮಾಡಬೇಕು ಪ್ರಚೋದನಕಾರಿ ಹೇಳಿಕೆಗಳನ್ನು ಉತ್ತೇಜನ ನೀಡಿದ ಆರೋಪವೂ ಕೇಳಿಬಂದಿತ್ತು. ಆ ಪ್ರಸಾರದ ಬಳಿಕ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ಸಾರ್ವಜನಿಕ ಚರ್ಚೆಗೆ ಕಾರಣವಾಗಿತ್ತು.

ಪ್ರಸ್ತುತ ಮೀಸಲಾತಿ ಕುರಿತ ಹೇಳಿಕೆಗಳ ಸಂಬಂಧ ದಾಖಲಾಗಿರುವ ಹೊಸ ದೂರಿನೊಂದಿಗೆ, ಅರುಣ್ ಬಡಿಗೇರ್ ಅವರ ಹಿಂದಿನ ವಿವಾದಾತ್ಮಕ ಪ್ರಸಾರಗಳು ಮತ್ತು ಅವುಗಳ ವಿರುದ್ಧ ಕೇಳಿಬಂದ ಆರೋಪಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ.

ಆದರೆ ಈ ಹಿಂದಿನ ಎಲ್ಲಾ ಆರೋಪಗಳಲ್ಲಿ ಅಂತಿಮ ನ್ಯಾಯಾಂಗ ತೀರ್ಪು ಅಥವಾ ಕಾನೂನು ಪ್ರಕ್ರಿಯೆಯ ಫಲಿತಾಂಶ ಏನೆಂಬುದು ಪ್ರತ್ಯೇಕವಾಗಿ ಪರಿಗಣಿಸಬೇಕಾದ ವಿಷಯವಾಗಿದೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು