ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮರಾಠಿಗರು ಹಿಂದಿ ಹೇರಿಕೆ ಸಹಿಸುವುದಿಲ್ಲ, ಅದರ ಪರಿಣಾಮವೇ ರಾಜ್ಯದಲ್ಲಿ ತ್ರಿಭಾಷಾ ನೀತಿ ರದ್ದು; ರಾಜ್ ಠಾಕ್ರೆ

PPeepal Media Desk

Peepal Media Desk • ದೇಶ, ಮೀಡಿಯಾ, ರಾಜಕೀಯ

• 1 ನಿಮಿಷದ ಓದು

ಮರಾಠಿಗರು ಹಿಂದಿ ಹೇರಿಕೆ ಸಹಿಸುವುದಿಲ್ಲ, ಅದರ ಪರಿಣಾಮವೇ ರಾಜ್ಯದಲ್ಲಿ ತ್ರಿಭಾಷಾ ನೀತಿ ರದ್ದು; ರಾಜ್ ಠಾಕ್ರೆ

ಹಿಂದಿಯನ್ನು ಹೆಚ್ಚು ಭಾಷಿಕರು ಬಳಸುತ್ತಿರಬಹುದು.  ಆದರೆ ಅದನ್ನು ನಮ್ಮ ಮೇಲೆ ಹೇರಲು ಅದೇನು ರಾಷ್ಟ್ರ ಭಾಷೆ ಅಲ್ಲ. ಹಿಂದಿ ಹೇರಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ವಿಪಕ್ಷಗಳ ಒತ್ತಡಕ್ಕೆ ಮಣಿದು ಮಹಾರಾಷ್ಟ್ರ ಸರಕಾರವು ರಾಜ್ಯದಲ್ಲಿ ತ್ರಿಭಾಷಾ ನೀತಿ ಜಾರಿ ಆದೇಶ ವಾಪಸ್‌ ಪಡೆದ ಬೆನ್ನಲ್ಲೇ ರಾಜ್ ಠಾಕ್ರೆ ಈ ಮಾತನ್ನು ಹೇಳಿದ್ದಾರೆ. ಹಿಂದಿ ರಾಷ್ಟ್ರಭಾಷೆಯಲ್ಲ. ಬೇರಾವುದೇ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳ ಮೇಲೆ ಹಿಂದಿ ಹೇರಿಕೆ ನಡೆದರೆ ನಾವು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಶಾಲೆಗಳಲ್ಲಿ 1-5ನೇ ತರಗತಿಗೆ ತ್ರಿಭಾಷಾ ಸೂತ್ರದ ಭಾಗವಾಗಿ ಹಿಂದಿ ಕಲಿಸುವ ಬಿಜೆಪಿ ಸರ್ಕಾರದ ನಿರ್ಣಯಕ್ಕೆ ರಾಜ್ಯಾದ್ಯಂತ ವಿರೋಧ ಭುಗಿಲೆದ್ದ ಬೆನ್ನಲ್ಲೆ, ಸರ್ಕಾರ ತನ್ನ ನಿರ್ಣಯವನ್ನು ಹಿಂಪಡೆದುಕೊಂಡಿದೆ. ಇದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಮಹಾರಾಷ್ಟ್ರದ ವಿಪಕ್ಷ ನಾಯಕ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಹರ್ಷ ವ್ಯಕ್ತಪಡಿಸಿದ್ದಾರೆ.

ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ ಕೂಡ ಪ್ರತಿಕ್ರಿಯಿಸಿದ್ದು, ಹಿಂದಿ ಹೇರಿಕೆ ವಿರುದ್ಧ ರಾಜಕೀಯ ಪಕ್ಷಗಳ ಜಂಟಿ ಹೋರಾಟ ನಡೆಯಬಾರದು ಎಂಬ ಕಾರಣಕ್ಕೆ ಸರ್ಕಾರವು ಏಕಾಏಕಿ ತ್ರಿಭಾಷಾ ನೀತಿ ರದ್ದು ಮಾಡಿದೆ. ಹಾಗಂತ, ನಮ್ಮ ಹೋರಾಟ ನಿಲ್ಲಬಾರದು, ಮುಂದೆಯೂ ಎಲ್ಲ ವಿಚಾರಗಳಲ್ಲೂ ಇದೇ ರೀತಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು