ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೈ ತಪ್ಪಿದ ಜೆಡಿಎಲ್‌ಪಿ ನಾಯಕ ಸ್ಥಾನ ; ಜಿಟಿ ದೇವೇಗೌಡ ಅಸಮಾಧಾನ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಕೈ ತಪ್ಪಿದ ಜೆಡಿಎಲ್‌ಪಿ ನಾಯಕ ಸ್ಥಾನ ; ಜಿಟಿ ದೇವೇಗೌಡ ಅಸಮಾಧಾನ

ಹಿರಿಯ ಜೆಡಿಎಸ್ ನಾಯಕ ಜಿಟಿ ದೇವೇಗೌಡರಿಗೆ ಜೆಡಿಎಸ್ ಶಾಸಕಾಂಗದ ನಾಯಕ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.

ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸಿ.ಬಿ. ಸುರೇಶ್‌ಬಾಬು ಅವರಿಗೆ ಸಿಕ್ಕಿದ್ದಕ್ಕೆ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಮ್ಮ ಆಪ್ತ ವಲಯದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು, ಜೆಡಿಎಸ್ ನಾಯಕ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧವೂ ಬೇಸರ ವ್ಯಕ್ತಪಡಿಸಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಜೆಡಿಎಸ್‌ ನಾಯಕ ಸ್ಥಾನ ತಮಗೇ ಸಿಗಲಿದೆ ಎಂದು ಜಿ.ಟಿ.ದೇವೇಗೌಡ ನಿರೀಕ್ಷೆ ಇಟ್ಟುಕೊಂಡಿದ್ದರು. ಹಲವು ದಿನಗಳಿಂದ ಜಿಟಿ ದೇವೇಗೌಡರಿಗೆ ಸ್ಥಾನ ಕೈತಪ್ಪಿಸಲು ಜೆಡಿಎಸ್ ಪಕ್ಷದ ಒಳಗೇ ನಡೆಯುತ್ತಿದ್ದ ತಂತ್ರಗಳ ಬಗ್ಗೆ ಮಾಹಿತಿ ಇದ್ದ ಜಿಟಿ ದೇವೇಗೌಡರು, ಹೆಚ್ ಡಿ ಕುಮಾರಸ್ವಾಮಿ ಕೂಡ ಇದಕ್ಕೆ ತಲೆದೂಗಿರುವ ಬಗ್ಗೆ ತಮ್ಮ ಆಪ್ತ ವಲಯದಲ್ಲಿ ಬೇಸರ ತೋಡಿಕೊಂಡಿದ್ದಾರೆ.

ಸೋಮವಾರದ ವಿಧಾನಸಭಾ ಕಲಾಪದಲ್ಲೂ ಯಾವ ಪೂರ್ವ ಮಾಹಿತಿಯೂ ನೀಡದೇ ಸುರೇಶ್‌ ಬಾಬು ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಿದ್ದು ವಿಧಾನಸಭೆಯಲ್ಲಿ ಸ್ಪೀಕರ್‌ ಯುಟಿ ಖಾದರ್‌ ಅವರು ಈ ವಿಚಾರವನ್ನು ಪ್ರಕಟಿಸಿಯೂ ಬಿಟ್ಟರು. ಆ ನಂತರ ಎರಡೂ ದಿನಗಳ ಕಲಾಪಕ್ಕೆ ಜಿಟಿ ದೇವೇಗೌಡ ಗೈರಾಗಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಲು ಪ್ರಯತ್ನಿಸಿರುವ ಸುರೇಶ್‌ಬಾಬು, ನಮ್ಮಲ್ಲಿ ಯಾವುದೇ ಅಸಮಾಧಾನಗಳಿಲ್ಲ. ಮೇಲ್ಮನೆಯಲ್ಲಿ ಭೋಜೇಗೌಡರನ್ನು ಜೆಡಿಎಸ್‌ ನಾಯಕರನ್ನಾಗಿ ಮಾಡಿದ್ದು, ವಿಧಾನಸಭೆಯಲ್ಲಿ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜಿ.ಟಿ.ದೇವೇಗೌಡರು ಪಕ್ಷದ ಕೋರ್‌ ಕಮಿಟಿ ಅಧ್ಯಕ್ಷರಾಗಿದ್ದಾರೆ ಎಂದು ಸಮಾಧಾನದ ಮಾತುಗಳನ್ನು ಆಡಿದ್ದರು.

“ಪಕ್ಷದಲ್ಲಿ ನನಗೆ ಪದೇಪದೆ ಅನ್ಯಾಯ ಆಗುತ್ತಲೇ ಇದೆ. ಈ ಹಿಂದೆ ಪಕ್ಷ ತೊರೆಯಲು ಸಿದ್ಧನಾಗಿದ್ದೆ. ಆದರೆ ಬಲವಂತಕ್ಕೆ ಉಳಿದುಕೊಂಡೆ. ಕಣ್ಣೊರೆಸಲು ನನಗೆ ಕೋರ್‌ ಕಮಿಟಿ ಅಧ್ಯಕ್ಷ ಸ್ಥಾನ ನೀಡಿದರು. ಈ ಸ್ಥಾನ ಅಸಮಾಧಾನ ತಣಿಸಲೇ ಹೊರತು, ಇದರಿಂದ ಏನೂ ಪ್ರಯೋಜನವಿಲ್ಲ ಪಕ್ಷದಲ್ಲಿ ಹಿರಿಯನಾದ ನನಗೆ ಜೆಡಿಎಲ್‌ಪಿ ನಾಯಕ ಸ್ಥಾನ ಸಿಗಬೇಕಿತ್ತು. ಮಾಜಿ ಸಚಿವ ಸಾ.ರಾ. ಮಹೇಶ್‌ ಕುತಂತ್ರದಿಂದ ನನಗೆ ಸ್ಥಾನ ತಪ್ಪಿದೆ” ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು