ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ಸರ್ಕಾರ ರಾಜಕೀಯ ಸ್ಥಿರತೆ ತಂದಿದೆ: ಅಮಿತ್ ಶಾ

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಮೋದಿ ಸರ್ಕಾರ ರಾಜಕೀಯ ಸ್ಥಿರತೆ ತಂದಿದೆ: ಅಮಿತ್ ಶಾ

ಹೊಸದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ರಚನೆಯಾಗಿ 100 ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದರು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದೇಶದಲ್ಲಿ ರಾಜಕೀಯ ಸ್ಥಿರತೆ ತಂದಿದೆ ಎಂದರು. ಅನೇಕ ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅದಕ್ಕೆ ಸಾಕ್ಷಿಯಾಗಿ ಜನರೇ ನಿಂತಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರೊಂದಿಗೆ ಸಚಿವರಾದ ಅಶ್ವಿನಿ ವೈಷ್ಣವ್ ಭಾಗವಹಿಸಿದ್ದರು. 100 ದಿನಗಳ ಆಡಳಿತದಲ್ಲಿ ಆಗಿರುವ ಪ್ರಗತಿಯ ಕಿರುಪುಸ್ತಕವನ್ನು ಅಮಿತ್ ಶಾ ಅನಾವರಣಗೊಳಿಸಿದರು.

ಹತ್ತು ವರ್ಷಗಳ ಅಭಿವೃದ್ಧಿ, ಭದ್ರತೆ ಮತ್ತು ಕಲ್ಯಾಣದ ನಂತರ ಜನರು ಮೂರನೇ ಬಾರಿಗೆ ಬಿಜೆಪಿಯ ಮೈತ್ರಿಗೆ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು. ಕಳೆದ 60 ವರ್ಷಗಳಲ್ಲಿ ಈ ರೀತಿ ಆಗಿರುವುದು ಇದೇ ಮೊದಲು ಎನ್ನಲಾಗಿದೆ. ದೇಶದಲ್ಲಿ ರಾಜಕೀಯ ಸ್ಥಿರತೆ ತಂದು ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದೆ ಎಂದರು. ಪ್ರಧಾನಿ ಮೋದಿ ತಂದಿರುವ ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಪುರಾತನ ಹಾಗೂ ಆಧುನಿಕ ಶಿಕ್ಷಣ ಪದ್ಧತಿಗಳಿವೆ ಎಂದರು. ಶಿಕ್ಷಣ ವ್ಯವಸ್ಥೆಯು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತದೆ ಎಂದು ಗೃಹ ಸಚಿವರು ಹೇಳಿದರು.

ತಮ್ಮ ನೂರು ದಿನಗಳ ಆಡಳಿತದಲ್ಲಿ ಸುಮಾರು ಮೂರು ಲಕ್ಷ ಕೋಟಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಬಹಿರಂಗಪಡಿಸಿದರು. ಕಳೆದ ಹತ್ತು ವರ್ಷಗಳಲ್ಲಿ ಮನೆ, ಶೌಚಾಲಯ, ಗ್ಯಾಸ್ ಸಂಪರ್ಕ, ಕುಡಿಯುವ ನೀರು, ವಿದ್ಯುತ್, ಉಚಿತ ಆಹಾರ ಧಾನ್ಯ, ಆರೋಗ್ಯ ಒದಗಿಸಲಾಗಿದೆ ಎಂದರು. ಮುಂದಿನ ಚುನಾವಣೆವರೆಗೂ ದೇಶದಲ್ಲಿ ನಿವೇಶನ ರಹಿತರು ಇರಬಾರದು ಎಂಬ ಉದ್ದೇಶದಿಂದ ಕೆಲಸ ಮಾಡುತ್ತೇನೆ ಎಂದು ಅಮಿತ್ ಶಾ ಹೇಳಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು