ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ಜನ್ಮದಿನ ‘ವಿಶ್ವ ನಿರುದ್ಯೋಗ ದಿನ’: ಯುವ ಕಾಂಗ್ರೆಸ್‌ನಿಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಮೋದಿ ಜನ್ಮದಿನ ‘ವಿಶ್ವ ನಿರುದ್ಯೋಗ ದಿನ’: ಯುವ ಕಾಂಗ್ರೆಸ್‌ನಿಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ವಿಶ್ವ ನಿರುದ್ಯೋಗ ದಿನ’ವಾಗಿ ಆಚರಿಸಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಉದ್ಯೋಗ ಸೃಷ್ಟಿ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮುಖಂಡರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆ ಈಡೇರಿಲ್ಲ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಅವರನ್ನು ಗುರಿಯಾಗಿಸಿಕೊಂಡ ವ್ಯಂಗ್ಯಾತ್ಮಕ ಸಂದೇಶಗಳಿರುವ ಪೋಸ್ಟರ್‌ಗಳು ಹಾಗೂ ಬ್ಯಾನರ್‌ಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಅಂಗವಾಗಿ ‘ಮೆಲೋಡಿ’ ಚಾಕೊಲೇಟ್‌ಗಳನ್ನು ಹಂಚಲಾಯಿತು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಮಾತನಾಡಿ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ವರ್ಷಗಳ ಕಾಲ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು. ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬದಿಂದ ಉದ್ಯೋಗಾಕಾಂಕ್ಷಿಗಳ ಭವಿಷ್ಯಕ್ಕೆ ಹೊಡೆತ ಬೀಳುತ್ತಿದೆ ಎಂದು ಆರೋಪಿಸಿದರು.

ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಸರ್ಕಾರ ವಿಫಲವಾದರೆ ದೇಶದ ಭವಿಷ್ಯ ನಿರ್ಮಾಣ ಹೇಗೆ ಸಾಧ್ಯ ಎಂಬ ಪ್ರಶ್ನೆ ಎದುರಾಗುತ್ತದೆ ಎಂದು ಅವರು ಹೇಳಿದರು. ನಿರುದ್ಯೋಗದ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತಪಡಿಸಿದ ಅವರು, ಮುಂದಿನ ಪೀಳಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನಿರುದ್ಯೋಗದ ಪಿತಾಮಹ’ ಎಂದು ಕರೆಯುವುದು ಖಚಿತ ಎಂದು ಹೇಳಿಕೆ ನೀಡಿದರು.

ನೀತಿ ಆಯೋಗದ ‘Reimagining Skilling for Viksit Bharat@2047’ ವರದಿಯನ್ನು ಉಲ್ಲೇಖಿಸಿದ ಯುವ ಕಾಂಗ್ರೆಸ್ ಮುಖಂಡರು, 15ರಿಂದ 29 ವರ್ಷ ವಯಸ್ಸಿನ ಸುಮಾರು 8.7 ಕೋಟಿ ಯುವಕರು ಶಿಕ್ಷಣ, ಉದ್ಯೋಗ ಅಥವಾ ತರಬೇತಿಯಲ್ಲಿ ತೊಡಗಿಸಿಕೊಂಡಿಲ್ಲ ಎಂದು ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ 80 ಸಚಿವಾಲಯಗಳು ಮತ್ತು ಇಲಾಖೆಗಳ ವ್ಯಾಪ್ತಿಯಲ್ಲಿ ಮಂಜೂರಾಗಿರುವ 8.23 ಲಕ್ಷಕ್ಕೂ ಅಧಿಕ ನಾಗರಿಕ ಹುದ್ದೆಗಳು ಖಾಲಿ ಉಳಿದಿವೆ ಎಂಬ ಆರ್‌ಟಿಐ ಮಾಹಿತಿಯನ್ನೂ ಅವರು ಪ್ರಸ್ತಾಪಿಸಿದರು.

ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ನೇಮಕಾತಿ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಯುವ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು