ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ – 119 ಸಂಸದರ ಸಹಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ, ರಾಜಕೀಯ

• 1 ನಿಮಿಷದ ಓದು

ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ – 119 ಸಂಸದರ ಸಹಿ

ನವದೆಹಲಿ: ಲೋಕಸಭೆ ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ನೋಟಿಸ್ ನೀಡಿವೆ. ಈ ನೋಟಿಸ್‌ಗೆ 119 ಸಂಸದರು ಸಹಿ ಹಾಕಿದ್ದಾರೆ. ನೋಟಿಸ್ ಮಾನ್ಯವಾಗಬೇಕಾದರೆ ಕನಿಷ್ಠ 50 ಸಂಸದರ ಸಹಿ ಬೇಕು. ಭಾರತದ ಸಂವಿಧಾನದ 94ಸಿ ವಿಧಿಯಡಿ ನೋಟಿಸ್ ಸಲ್ಲಿಸಲಾಗಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ಉಪನಾಯಕ ಗೌರವ್ ಗೋಗೊಯ್ ತಿಳಿಸಿದ್ದಾರೆ.

ನೋಟಿಸ್‌ನಲ್ಲಿ ಏನಿದೆ?

ಲೋಕಸಭೆಯ ಕಲಾಪಗಳನ್ನು ನಡೆಸುವಾಗ ಪಕ್ಷಪಾತ ತೋರಿಸುತ್ತಿದ್ದಾರೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ವಿರೋಧ ಪಕ್ಷದ ನಾಯಕರಿಗೆ ಹಲವು ಬಾರಿ ಮಾತನಾಡಲು ಅವಕಾಶ ನೀಡಿಲ್ಲ ಎಂದು ಕೆಲವು ನಿದರ್ಶನಗಳನ್ನು ಉಲ್ಲೇಖಿಸಲಾಗಿದೆ.

  • 2025ರ ಫೆಬ್ರುವರಿ 2ರಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಕುರಿತಾದ ಭಾಷಣವನ್ನು ಪೂರ್ಣಗೊಳಿಸಲು ಅನುಮತಿ ನೀಡಲಿಲ್ಲ. ಇದು ಕೇವಲ ಒಂದು ಘಟನೆಯಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಬಹುತೇಕವಾಗಿ ಮಾತನಾಡಲು ಅವಕಾಶ ನೀಡಲಾಗುವುದಿಲ್ಲ.
  • 2025 ಫೆ. 3ರಂದು ವಿರೋಧ ಪಕ್ಷದ 8 ಸದಸ್ಯರನ್ನು ಬಜೆಟ್ ಅಧಿವೇಶನದ ಪೂರ್ಣ ಅವಧಿಗೆ ಸ್ವೇಚ್ಛಾನುಸಾರ ಅಮಾನತು ಮಾಡಲಾಗಿದೆ. ಅವರ ಹಕ್ಕನ್ನು ಪ್ರತಿಪಾದಿಸಿದ್ದಕ್ಕೆ ಈ ದಂಡನೆ ವಿಧಿಸಲಾಗಿದೆ.
  • 2025ರ ಫೆ. 4ರಂದು ಭಾರತೀಯ ಜನತಾ ‍ಪಕ್ಷದ ಸದಸ್ಯರೊಬ್ಬರು ಇಬ್ಬರು ಮಾಜಿ ಪ್ರಧಾನಿಗಳ ಬಗ್ಗೆ ಆಕ್ಷೇಪಾರ್ಹ ಹಾಗೂ ವೈಯಕ್ತಿಕ ದಾಳಿ ನಡೆಸಿದ್ದರು. ಸ್ಥಾಪಿತ ಸಂಪ್ರದಾಯಗಳು ಮತ್ತು ಶಿಷ್ಟಾಚಾರ ನಿರ್ಲಕ್ಷಿಸಿದ್ದಕ್ಕಾಗಿ ಒಮ್ಮೆಯೂ ಎಚ್ಚರಿಕೆಯೂ ನೀಡಲಿಲ್ಲ. ನಮ್ಮ ಮನವಿಯ ಹೊರತಾಗಿಯೂ ಪದೇ ಪದೇ ತಪ್ಪೆಸಗುತ್ತಿರುವ ಆ ಸದಸ್ಯರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ವಿಷಯಗಳು: #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು