ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಪಕ್ಷಕ್ಕೆ ಮುದ್ದಹನುಮೇಗೌಡ ರಾಜೀನಾಮೆ ಸಾಧ್ಯತೆ

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಕಾಂಗ್ರೆಸ್ ಪಕ್ಷಕ್ಕೆ ಮುದ್ದಹನುಮೇಗೌಡ ರಾಜೀನಾಮೆ ಸಾಧ್ಯತೆ

ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಮತ್ತು ಮುಂಬರುವ ಚುನಾವಣೆಗೆ ತನ್ನ ಪಾತ್ರ ಏನು ಎಂಬ ಬಗ್ಗೆ ಗೊಂದಲದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆಯುವ ನಿರ್ಧಾರಕ್ಕೆ ಮಾಜಿ ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ ಬಂದಿದ್ದಾರೆ.

ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೊಂದಿಗಿನ ಮಾತುಕತೆ ನಂತರ ಮುದ್ದಹನುಮೇ ಗೌಡರು ಕಾಂಗ್ರೆಸ್ ಗೆ ರಾಜೀನಾಮೆ ನೀಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಎರಡು ಬಾರಿ ಅವಕಾಶ ವಂಚಿತರಾಗಿದ್ದ ಮುದ್ದಹನುಮೇ ಗೌಡರು ಮೂರನೇ ಬಾರಿಗೆ ಕುಣಿಗಲ್ ಕ್ಷೇತ್ರದ ಶಾಸಕ ಸ್ಥಾನದ ಆಕಾಂಕ್ಷಿ ಆಗಿದ್ದರು.

ಹಾಲಿ ಶಾಸಕರಾದ ಡಾ.ರಂಗನಾಥ್ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಹತ್ತಿರದ ಸಂಬಂಧಿಯಾದ ಕಾರಣ ಮುದ್ದಹನುಮೇಗೌಡರಿಗೆ ಮುಂದಿನ ಬಾರಿ ಟಿಕೆಟ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಮುದ್ದಹನುಮೇಗೌಡರು ರಾಜ್ಯಸಭಾ ಟಿಕೆಟ್ ಆಕಾಂಕ್ಷಿ ಆಗಿದ್ದರು. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾಗಿದ್ದರು. ನಂತರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗೆ ಮುದ್ದಹನುಮೇಗೌಡರ ಹೆಸರು ಮುಂಚೂಣಿಯಲ್ಲಿ ಇತ್ತು. ನಂತರ ಕಾಂಗ್ರೆಸ್ ಜೆಡಿಎಸ್ ಜಂಟಿ ಅಭ್ಯರ್ಥಿಯಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕ್ಷೇತ್ರ ಬಿಡುವ ಕಾರಣ ಮತ್ತೆ ಮುದ್ದಹನುಮೇಗೌಡರು ಅವಕಾಶ ವಂಚಿತರಾಗಿದ್ದರು.

ಸಧ್ಯ ಈ ಎಲ್ಲಾ ಬೆಳವಣಿಗೆ ಆಧರಿಸಿ ಮುದ್ದಹನುಮೇಗೌಡ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಮುಂದಿನ ಚುನಾವಣೆಗೆ ಕುಣಿಗಲ್ ಕ್ಷೇತ್ರದಿಂದಲೇ ಚುನಾವಣೆ ಸ್ಪರ್ಧಿಸುವುದು ಎಂದು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದ ಮೇಲೆ ಮುಂದೆ ಯಾವ ಪಕ್ಷ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಮತ್ತೆ ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ ಎಂಬಂತೆ ಯಾವ ರಾಜಿ ಸಂಧಾನಕ್ಕೂ ಬಾರದಂತೆ ಮುದ್ದಹನುಮೇಗೌಡರು ನಿರ್ಧರಿಸಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು