ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಭಾರತದಲ್ಲಿ ಮುಸಲ್ಮಾನರಿಗೆ ಭದ್ರತೆ ಇಲ್ಲ” : ಅಮೇರಿಕಾದ ಧಾರ್ಮಿಕ ಸ್ವಾತಂತ್ರ್ಯ ಆಯೋಗದ ವರದಿ

PPeepal Media Desk

Peepal Media Desk ದೇಶ, ಮೀಡಿಯಾ, ರಾಜಕೀಯ

• 1 ನಿಮಿಷದ ಓದು

“ಭಾರತದಲ್ಲಿ ಮುಸಲ್ಮಾನರಿಗೆ ಭದ್ರತೆ ಇಲ್ಲ” : ಅಮೇರಿಕಾದ ಧಾರ್ಮಿಕ ಸ್ವಾತಂತ್ರ್ಯ ಆಯೋಗದ ವರದಿ

‘ಭಾರತದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರ ಪರಿಸ್ಥಿತಿ ಹದಗೆಡುತ್ತಿದೆ’ ಹೀಗೆಂದು ಹೇಳಿರುವುದು ಬೇರಾರೂ ಅಲ್ಲ. ಭಾರತ ಪ್ರಧಾನಿ ನರೇಂದ್ರ ಮೋದಿಯ ಆಪ್ತಮಿತ್ರ ಡೋನಾಲ್ಡ್ ಟ್ರಂಪ್ ಆಡಳಿತ ಇರುವ ಅಮೇರಿಕಾ..

ಹೌದು. ಅಮೇರಿಕಾದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗವು ಭಾರತದೊಳಗಿನ ಮುಸಲ್ಮಾನರ ಮೇಲಿನ ದ್ವೇಷ ರಾಜಕಾರಣವನ್ನು ಎತ್ತಿ ಹಿಡಿದು ಅಮೇರಿಕಾ ಇದರ ಬಗ್ಗೆ ಗಮನ ಹರಿಸಲು ಕೋರಿದೆ. ಅಷ್ಟೇ ಅಲ್ಲದೆ ಅಲ್ಲದೆ, ‘ಭಾರತದ ಗುಪ್ತಚರ ಸಂಸ್ಥೆಯಾದ ರಾ, ಸಿಖ್‌ ಪ್ರತ್ಯೇಕತವಾದಿಗಳ ಹತ್ಯೆ ನಡೆಸಲು ಸಂಚು ರೂಪಿಸುತ್ತಿದೆ ಎಂದೂ ಆರೋಪಿಸಿದೆ.

ಆದ ಕಾರಣ ಅಮೆರಿಕ ಆದಷ್ಟು ಬೇಗನೆ ಇದನ್ನು ಗಣನೆಗೆ ತೆಗೆದುಕೊಂಡು ಅದನ್ನು ನಿರ್ಬಂಧಿಸಬೇಕು’ ಎಂದು ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗವು ಅಮೆರಿಕದ ಸರ್ಕಾರವನ್ನು ಒತ್ತಾಯಿಸಿದೆ. 

ಟ್ರಂಪ್‌ ಆಡಳಿತಕ್ಕೆ ವಾರ್ಷಿಕ ವರದಿ ಸಲ್ಲಿಸಿರುವ ಆಯೋಗ, ‘2024ರಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಹಾಗೂ ತಾರತಮ್ಯ ಅಧಿಕವಾಗಿದ್ದು, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ’ ಎಂದು ಕಿಡಿಕಾರಿದೆ.

ಅಮೆರಿಕದಲ್ಲಿರುವ ಖಲಿಸ್ತಾನಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನು ಹತ್ಯೆಗೆ ಭಾರತದ ಗುಪ್ತಚರ ಮಾಜಿ ಅಧಿಕಾರಿ ವಿಕಾಶ್‌ ಯಾದವ್‌ ನಡೆಸಿದ್ದರು ಎಂದು ಅಮೆರಿಕ ಇತ್ತೀಚೆಗೆ ಆರೋಪಿಸಿತ್ತು. ಅದರ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ಇದಕ್ಕೂ ಮುನ್ನ 2023ರ ಜೂ.18ರಂದು ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ನಾಯಕ ಹರ್ದೀಪ್‌ ಸಿಂಗ್‌ ಕೊಲೆಯ ಹಿಂದೆ ಭಾರತದ ಗುಪ್ತಚರ ಸಂಸ್ಥೆಯ ಕೈವಾಡವಿದೆ ಎಂದು ಕೆನಡಾ ಆರೋಪಿಸಿತ್ತು.

ಸಹಜವಾಗಿಯೇ ಭಾರತದಲ್ಲಿ ಅಂತಹ ಯಾವುದೇ ಬೆಳವಣಿಗೆ ಇಲ್ಲ ಎಂದು ಭಾರತ ಸರ್ಕಾರ ಇದಕ್ಕೆ ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌, ‘ಪ್ರಜಾಪ್ರಭುತ್ವ ಮತ್ತು ಸಹಿಷ್ಣುತೆಯ ಸಂಕೇತವಾಗಿರುವ ಭಾರತದ ಸ್ಥಾನವನ್ನು ದುರ್ಬಲಗೊಳಿಸುವ ಯತ್ನಗಳು ಯಶಸ್ವಿಯಾಗುವುದಿಲ್ಲ. ಆಯೋಗಕ್ಕೆ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಿಜವಾದ ಕಾಳಜಿಯೇ ಇಲ್ಲ ಎಂದು ಪ್ರತ್ಯುತ್ತರ ನೀಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು