ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಕ್ಕೆ ಹೊಸ ತಲೆನೋವು ತಂದ ಈಶ್ವರಪ್ಪ ಹೇಳಿಕೆ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಕ್ಕೆ ಹೊಸ ತಲೆನೋವು ತಂದ ಈಶ್ವರಪ್ಪ ಹೇಳಿಕೆ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ನಡುವಿನ ಮೈತ್ರಿ ಇನ್ನೂ ಸರಿಯಾದ ನೆಲೆಗೆ ಬರುವ ಮೊದಲೇ ಅಪಸ್ವರಗಳು ಒಂದರ ಹಿಂದೆ ಒಂದರಂತೆ ಕೇಳಿ ಬರತೊಡಗಿವೆ. ಇಂದು ಈಶ್ವರಪ್ಪ ದ್ವಿಪಕ್ಷಗಳ ಮೈತ್ರಿಗೆ ಸಂಬಂಧಿಸಿದಂತೆ ಮುಖ್ಯವಾದ ಹೇಳಿಕೆಯೊಂದನ್ನು ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ನಿನ್ನೆಯಷ್ಟೇ ಮಂಡ್ಯ ಸಂಸದೆ ಸುಮಲತಾ ತಾನು ಯಾವುದೇ ಕಾರಣಕ್ಕೂ ಮಂಡ್ಯ ಟಿಕೆಟ್‌ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲವೆನ್ನುವ ಮೂಲಕ ಜೆಡಿಎಸ್‌ ಪಕ್ಷಕ್ಕೆ ಟಕ್ಕರ್‌ ಕೊಟ್ಟಿದ್ದರು. ಈಗ ಈಶ್ವರಪ್ಪ ಬೆಂಗಳೂರು ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ ಎನ್ನುವ ಮೂಲಕ ಜೆಡಿಸ್‌ ಪಕ್ಷಕ್ಕೆ ಶಾಕ್‌ ಟ್ರೀಟ್ಮೆಂಟ್‌ ನೀಡಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಒಮ್ಮೆಯೂ ಗೆದ್ದಿಲ್ಲ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ 12 ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಜೆಡಿಎಸ್ ಗೆ ಬೆಂಬಲ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಅವರು ಖಡಾಖಂಡಿತವಾಗಿ ತಿಳಿಸಿದ್ದಾರೆ.

ರಾಜ್ಯ ನಾಯಕರನ್ನು ಕಡೆಗಣಿಸಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡ ಹೈಕಮಾಂಡ್‌ ಈಗ ರಾಜ್ಯ ನಾಯಕರ ಅಸಹಕಾರವನ್ನು ಎದುರಿಸುತ್ತಿದೆ. ರಾಜ್ಯದ ಬಹುತೇಕ ನಾಯಕರಿಗೆ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದು ಇಷ್ಟವಿದ್ದಿರಲಿಲ್ಲ. ಹಾಸನದ ಪ್ರೀತಂ ಗೌಡ, ಎ ಮಂಜು, ಸುಮಲತಾ, ಸದಾನಂದ ಗೌಡ ಸೇರಿದಂತೆ ಹಲವು ನಾಯಕರು ಜೆಡಿಎಸ್‌ ಜೊತೆಗಿನ ಮೈತ್ರಿಯಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅತ್ತ ಜೆಡಿಎಸ್‌ ಪಕ್ಷದಲ್ಲೂ ಸಾಕಷ್ಟು ನಾಯಕರು ಇತರ ಪಕ್ಷಗಳಿಗೆ ವಲಸೆ ಹೋಗಿದ್ದು ಇನ್ನಷ್ಟು ಜನರು ಯಾವ ಪಕ್ಷಕ್ಕೆ ಹೋಗುವುದೆನ್ನುವ ಗೊಂದಲದಲ್ಲಿದ್ದಾರೆ.

ಜೆಡಿಎಸ್‌ ಜೊತೆಗಿನ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಮೀಸಲು ಎಂದಿರುವ ಈಶ್ವರಪ್ಪ ರಾಜ್ಯದಲ್ಲಿ ಇತರ ಚುನಾವಣೆಗಳ ವಿಷಯದಲ್ಲಿ ಜೆಡಿಎಸ್‌ ಪಕ್ಷವನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲವೆನ್ನುವ ಪರೋಕ್ಷ ಸಂದೇಶವನ್ನು ಕಳುಹಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು