ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

P

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 10:  ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ನಿಜಲಿಂಗಪ್ಪನವರು  ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು.
ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು ಎಂದರು.

ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕ
ಕರ್ನಾಟಕದ ಏಕೀಕರಣಕ್ಕೂ ಅವರು ದುಡಿದಿದವರು. ಪ್ರಾಮಾಣಿಕ,  ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ .
ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಹುಟ್ಟುಹಬ್ಬದಂದು ಸರ್ಕಾರ ಅವರನ್ನು ಸ್ಮರಿಸಿ ಗೌರವಿಸುತ್ತದೆ ಎಂದರು.

ಗ್ಯಾರಂಟಿಗಳ ಬಗ್ಗೆ ಸಿ ಎಲ್. ಪಿ ಯಲ್ಲಿ ಚರ್ಚೆಯೇ ಆಗಿಲ್ಲ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಪ್ರಶ್ನೆಗೆ ಉತ್ತರಿಸ ಗ್ಯಾರಂಟಿಗಳ ಬಗ್ಗೆ ಸಿ ಎಲ್. ಪಿ ಯಲ್ಲಿ ಚರ್ಚೆಯೇ ಆಗಲಿಲ್ಲ ಎಂದರು.

ಚಾರ್ಚ್ ಶೀಟ್ ನ್ನು  ನೋಡಿಲ್ಲ
ಧರ್ಮಸ್ಥಳದ  ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್ ಐ ಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಚಾರ್ಚ್ ಶೀಟ್ ನ್ನು ಇನ್ನೂ ನೋಡಿಲ್ಲ ಎಂದರು.

ಪ್ರಧಾನಿಗಳಿಗೆ ಪತ್ರ
ತೊಗರಿಬೇಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರಧಾನಿಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ಹೈ ಕಮಾಂಡ್ ನಿರ್ಧಾರವೇ ಅಂತಿಮ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುವರೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಸೂಚನೆಯೇ ಅಂತಿಮ ಎಂದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version