ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ : ಸಿದ್ದರಾಮಯ್ಯ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು : ಸಿದ್ದರಾಮಯ್ಯ ಅವರ ಎಲ್ಲಾ ನೇಮಕಾತಿಗಳಲ್ಲೂ ಹಗರಣ ನಡೆದಿದೆ ಎಂದು ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಅರೋಪ ಮಾಡಿದ್ದು, ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ ಎಂದು ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ʼಕೊಟ್ಟ ಕುದುರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬೊಮ್ಮಾಯಿ ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿʼ ಎಂದು ಟೀಕೆ ಮಾಡಿದ್ದಾರೆ.

ʼಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆʼ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್‌ ಗಾಂಧಿಯವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ ಎಂದು ಟೀಕಿಸಿದ್ದಾರೆ.

ʼನಮ್ಮ ನಾಯಕರಾದ ರಾಹುಲ್‌ ಗಾಂದಿಯವರ ಅವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲʼ ಎಂದು ಪಕ್ಷದ ಬಗ್ಗೆ ಹೇಳಿಕೊಂಡಿದ್ದಾರೆ.

ʼನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ತಾ-ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್ ಎಸ್ ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕುʼ ಎಂದು ವ್ಯಂಗ್ಯ ಮಾಡಿದ್ದಾರೆ.

ʼಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ?ʼ ಎಂದು ಬೊಮ್ಮಾಯಿಗೆ  ಪ್ರಶ್ನೆ ಮಾಡಿದ್ದಾರೆ.

ʼಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್‌ ಗಾಂದಿ ಅವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿ.ಕೆ ಶಿವಕುಮಾರ್‌ ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿʼ ಎಂದು ಕಿಡಿಕಾರಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು