ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕುತೂಹಲ ಕೆರಳಿಸಿದ ನಿತೀಶ್ ಕುಮಾರ್ ಅವರ ಪ್ರತಿಪಕ್ಷಗಳ ನಾಯಕರ ಭೇಟಿ.!

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಕುತೂಹಲ ಕೆರಳಿಸಿದ ನಿತೀಶ್ ಕುಮಾರ್ ಅವರ ಪ್ರತಿಪಕ್ಷಗಳ ನಾಯಕರ ಭೇಟಿ.!

ಎರಡು ದಿನದ ದೆಹಲಿ ಪ್ರವಾಸದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಮುಖವಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ಎದುರು ಪ್ರತಿಪಕ್ಷವಾಗಿ ನಿಂತ ಎಲ್ಲಾ ಪಕ್ಷದ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಎರಡು ದಿನಗಳ ದೆಹಲಿ ಭೇಟಿಯಲ್ಲಿ ಮೊದಲು ನಿತೀಶ್ ಕುಮಾರ್ ಸಿಪಿಎಂ ನಾಯಕ ಸೀತಾರಾಂ ಯಚೂರಿಯವರನ್ನು ಮತ್ತು ಸಿಪಿಐ ನಾಯಕರಾದ ಡಿ.ರಾಜಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಚರ್ಚೆಯ ನಂತರ ಸೀತಾರಾಂ ಯಚೂರಿಯವರು ನಿತೀಶ್ ಕುಮಾರ್ NDA ತೊರೆದದ್ದು ಉತ್ತಮ ನಿರ್ಧಾರ. ಆ ಮೂಲಕ ದೇಶದಲ್ಲಿ ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗುವ ಅವರ ನಡೆಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಇದು ಭಾರತದ ರಾಜಕೀಯಕ್ಕೆ ಉತ್ತಮ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.

ಆ ನಂತರ ದೆಹಲಿಯ ಆಮ್ ಆದ್ಮಿ ಪಕ್ಷದ ನಾಯಕರಾದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭೇಟಿ ಮಾಡಿ ಅಗತ್ಯ ರಾಜಕೀಯ ಚರ್ಚೆ ನಡೆಸಿದ್ದಾರೆ. ಪ್ರಮುಖವಾಗಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಬಳಸುವ ಅಸಂವಿಧಾನಿಕ ಆಪರೇಷನ್ ಕಮಲ, ಶಾಸಕರ ಕುದುರೆ ವ್ಯಾಪಾರದಿಂದ ಆಗುತ್ತಿರುವ ಗಂಭೀರ ಸಮಸ್ಯೆಗಳ ಜೊತೆಗೆ ಆಡಳಿತಾತ್ಮಕವಾಗಿ ಅಗತ್ಯವಿರುವ ಶಿಕ್ಷಣ, ಆರೋಗ್ಯ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ನಂತರ ಹರಿಯಾಣಾದ ಮಾಜಿ ಮುಖ್ಯಮಂತ್ರಿ ಓಂಪ್ರಕಾಶ್ ಚೌಟಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ಅವರನ್ನೂ ಭೇಟಿ ಮಾಡುವ ನಿರೀಕ್ಷೆ ಇದೆ.

ಸೋಮವಾರವೇ ದೆಹಲಿಗೆ ಭೇಟಿ ನೀಡಿದ್ದ ನಿತೀಶ್ ಕುಮಾರ್ ಮೊದಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರನ್ನು ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನೂ ಭೇಟಿ ಮಾಡಿ ಮಹತ್ವದ ರಾಜಕೀಯ ಚರ್ಚೆ ನಡೆಸಿದರು. ನಿತೀಶ್ ಕುಮಾರ್ ಅವರ ಪ್ರತಿಪಕ್ಷ ನಾಯಕರ ಭೇಟಿಯ ಹಿಂದೆ ಮುಂಬರುವ ದಿನಗಳಲ್ಲಿ ಪ್ರಧಾನಿ ಹುದ್ದೆಯ ಆಕಾಂಕ್ಷಿ ಇರಬಹುದು ಎಂಬ ಅನುಮಾನವನ್ನು ನಿತೀಶ್ ಕುಮಾರ್ ತಳ್ಳಿ ಹಾಕಿದ್ದಾರೆ.

ಭಿನ್ನ ರಾಜಕೀಯ ಸಿದ್ಧಾಂತಗಳನ್ನು ಒಳಗೊಂಡ ವಿವಿಧ ರಾಜಕೀಯ ಪಕ್ಷಗಳಿಗೆ ಬಿಜೆಪಿ ಸಿದ್ಧಾಂತಗಳ ಮತ್ತು ಆಡಳಿತ ವಿರೋಧಿ ಅಲೆಯನ್ನು ಸದುಪಯೋಗ ಪಡಿಸಿಕೊಳ್ಳಲು ನಿತೀಶ್ ಕುಮಾರ್ ಅವಕಾಶ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಈ ಮೂಲಕ ಬಿಹಾರದಲ್ಲಿ ಧಿಡೀರ್ ರಾಜಕೀಯ ಬೆಳವಣಿಗೆ ಮೂಲಕ ‘ಮಹಾಘಟಬಂಧನ್’ ರಚನೆಯ ರೀತಿಯೇ ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಮಾಡುತ್ತಿರುವುದು ಗಮನಾರ್ಹ ಸಂಗತಿ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು