ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾವು ಅಧಿಕಾರದಲ್ಲಿ ಇರುವ ವರೆಗೂ ಎಸ್ಕಾಂ ಖಾಸಗೀಕರಣ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

PPeepal Media Desk

Peepal Media Desk ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ನಾವು ಅಧಿಕಾರದಲ್ಲಿ ಇರುವ ವರೆಗೂ ಎಸ್ಕಾಂ ಖಾಸಗೀಕರಣ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವ ವರೆಗೂ ಸರ್ಕಾರದ ಅಧೀನದಲ್ಲಿ ಬರುವ ವಿದ್ಯುತ್ ಪ್ರಸರಣ ನಿಗಮಗಳನ್ನು ಖಾಸಗೀಕರಣ ಮಾಡುವುದಿಲ್ಲ. ಈಗಾಗಲೇ ಕೇಂದ್ರ ಸರ್ಕಾರದಿಂದ ಈ ಬಗ್ಗೆ ಒತ್ತಡ ಇದ್ದರೂ ನಾವು ಅದನ್ನು ಪರಿಗಣಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಹಿಂದೆ ನಾನು ಇಂಧನ ಸಚಿವನಾದ ದಿನದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಎಸ್ಕಾಂಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲೂ ಖಾಸಗಿಯವರಿಗೆ ನೀಡಬೇಕು ಎಂದು ಕೇಂದ್ರ ಸರ್ಕಾರ ನನ್ನ ಮೇಲೆ ಒತ್ತಡ ಹೇರಿತ್ತು ಎಂದು ಡಿಕೆ ಶಿವಕುಮಾರ್ ಹೇಳಿದರು.

ಕರ್ನಾಟಕ ಪ್ರಸರಣ ನಿಗಮ ನೌಕರರ ಸಂಘದ ವಜ್ರ ಮಹೋತ್ಸವ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಮಾತನಾಡಿದರು.

ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ, ಶೇ. 19-20ರಷ್ಟು ಟ್ರಾನ್ಸ್‌ಮಿಷನ್‌ ನಷ್ಟ ಆಗುತ್ತಿತ್ತು. ನಾವು ಅದನ್ನು ಶೇ. 10ಕ್ಕೆ ಇಳಿಸಿದ್ದೇವೆ. ಇದು ದೇಶಕ್ಕೆ ಮಾದರಿ. ಸಚಿವ ಕೆ.ಜೆ. ಜಾರ್ಜ್‌ ಅವರೂ ಸಹ ಈ ಇಲಾಖೆಯ ಜವಾಬ್ದಾರಿ ತೆಗೆದುಕೊಂಡು ಪಾರದರ್ಶಕವಾಗಿ ಬಹಳ ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ ಎಂದರು.

ಇಲಾಖೆಯಲ್ಲಿ ಈ ಹಿಂದೆ ಒಂದು ರೂಪಾಯಿ ಲಂಚ ಪಡೆಯದೇ, ಪಾರದರ್ಶಕವಾಗಿ 24 ಸಾವಿರ ನೌಕರರನ್ನು ನೇಮಕಾತಿ ಮಾಡಿದೆ. ನಿಮ್ಮ ಮನೆ ಬಾಗಿಲಿಗೆ ನೌಕರಿಯನ್ನು ಕೊಟ್ಟ ತೃಪ್ತಿ ನನಗಿದೆ ಎಂದರು. ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ರಾಜ್ಯದಲ್ಲಿ 11 ಸಾವಿರ ಮೆ.ವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿತ್ತು. ಆದರೆ ಇಲಾಖೆ ಜವಾಬ್ದಾರಿ ಬಿಡುವಾಗ ರಾಜ್ಯದಲ್ಲಿ 23 ಸಾವಿರ ಮೆ.ವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿತ್ತು ಎಂದು ಅವರು ವಿವರಿಸಿದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು