ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ: ಡಿಕೆಶಿ

P

Peepal Media • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ: ಡಿಕೆಶಿ

ಬೆಂಗಳೂರು: “ಈ ಸಾಲಿನ ಕೇಂದ್ರ ಬಜೆಟ್ಟಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಜೆಟ್ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಬಜೆಟ್ ನಲ್ಲಿ ನಿರ್ಮಲಾ ಸೀತರಾಮನ್ ಅವರು ತಮ್ಮ ಎನ್‌ಡಿಎ ಸರಕಾರವನ್ನು ಉಳಿಸಿಕೊಳ್ಳಲು ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದು ಅತ್ಯಂತ ನಿರಾಶಾದಾಯಕ ಬಜೆಟ್. ಈ ಬಜೆಟ್ ನಲ್ಲಿ ಕೇಂದ್ರ ಸರಕಾರ ದೇಶವನ್ನು ಒಂದಾಗಿ ನೋಡಿಲ್ಲ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದರು.

ಇದು ಕೇವಲ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ನೆರವು ನೀಡುವ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೀಗೆ ತಾರತಮ್ಯ ಮಾಡಿರುವುದು ಖಂಡನೀಯ” ಎಂದರು.

“ಪ್ರಧಾನಮಂತ್ರಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ನಾನು ಬಹಳಷ್ಟು ವಿಶ್ವಾಸ ಇಟ್ಟುಕೊಂಡಿದ್ದೆ. ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿ ಜಾಗತಿಕ ಮಟ್ಟದಲ್ಲಿ ತನ್ನದೇ ಚಾಪು ಮೂಡಿಸಿವೆ. ಹೀಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಮೂಲಸೌಕರ್ಯ ನೆರವು ಹಾಗೂ ಕರ್ನಾಟಕಕ್ಕೆ ಸಹಾಯ ಮಾಡುವ ಭರವಸೆ ಇಟ್ಟುಕೊಂಡಿದ್ದೆ. ಆದರೆ ಕರ್ನಾಟಕವನ್ನು ಹೊರಗಿಟ್ಟು ಬಜೆಟ್‌ ರೂಪಿಸಿದ್ದಾರೆ ಎಂದು ಅವರು ದೂರಿದರು.

ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಕಾಪಾಡುತ್ತಾರೆ. ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೇವು. ಆ ನಿರೀಕ್ಷೆಗಳು ಹುಸಿಯಾಗಿವೆ ಎಂದು ಆರೋಪಿಸಿದರು.

P

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version