ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುದ್ಧದ ಸಂಪೂರ್ಣ ಕ್ರೆಡಿಟ್ ಸಿಗಬೇಕಾದದು ಭಾರತೀಯ ಸೇನೆಗೇ ಹೊರತು ಯಾವುದೇ ಪಕ್ಷಕ್ಕಲ್ಲ : ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಯುದ್ಧದ ಸಂಪೂರ್ಣ ಕ್ರೆಡಿಟ್ ಸಿಗಬೇಕಾದದು ಭಾರತೀಯ ಸೇನೆಗೇ ಹೊರತು ಯಾವುದೇ ಪಕ್ಷಕ್ಕಲ್ಲ : ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಕ್ರೆಡಿಟ್ ನ್ನು ಯಾವುದೇ ಪಕ್ಷಗಳು ತೆಗೆದುಕೊಳ್ಳಬಾರದು. ಯುದ್ಧದ ಸಂಪೂರ್ಣ ಕ್ರೆಡಿಟ್ ಸಿಗಬೇಕಾದದು ಸೇನೆಗೇ ಹೊರತು ಬೇರಾರಿಗೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಎರಡೂ ದೇಶಗಳ ಡಿಜಿಎಂ ಸಭೆ ಇದೆ. ಸಭೆಯಲ್ಲಿ ಏನು ನಿರ್ಧಾರ ಬರುವುದೋ ಕಾದು ನೋಡೋಣ. ಅಲ್ಲಿಯವರೆಗೆ ಏನೂ ಹೇಳಲಾಗದು ಎಂದು ಹೇಳಿದ್ದಾರೆ.

1971ರ ಯುದ್ಧಕ್ಕೂ ಇವತ್ತಿನ ಸಂದರ್ಭಕ್ಕೂ ನಾನು ಹೋಲಿಕೆ ಮಾಡಿ ಮಾತನಾಡುವುದಿಲ್ಲ. ಅವತ್ತಿನ ಪರಿಸ್ಥಿತಿಗಳೇ ಬೇರೆ, ಇವತ್ತಿನ ಪರಿಸ್ಥಿತಿಗಳೇ ಬೇರೆ. ಟ್ರಪ್ ಟ್ವಿಟ್ ಬಗ್ಗೆಯಾಗಲಿ, ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಬಗ್ಗೆಯಾಲಿ ನಾನು ಮಾತನಾಡುವುದಿಲ್ಲ. ನನ್ನ ಮಾತನ್ನ ಸೀಜ್ ಫೈರಿಂಗ್ ಅಷ್ಟೇ ಸಿಮಿತ ಗೊಳಿಸುತ್ತೇನೆ‌ ಎಂದರು.

ಕದನ ವಿರಾಮ ಘೋಷಣೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕಿತ್ತು. ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷ ಸಭೆಯಲ್ಲಿ ಚರ್ಚೆಮಾಡಿ ನಿರ್ಧಾರ ಪ್ರಕಟಿಸಬಹುದಿತ್ತು ಆದರೆ ಅದನ್ನು ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿನ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನ ಹೊರಗೆ ಕಳುಹಿಸಿದ್ದೇವೆ‌ ಮೈಸೂರಿನಲ್ಲಿ ಮೂರು ಮಕ್ಕಳು ಮಾತ್ರ ಇದ್ದಾರೆ. ಅವರನ್ನ ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇವೆ‌ ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು ಹೀಗಾಗಿ ಮಕ್ಕಳ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಇದೆ. ಹೀಗಾಗಿ ಮಕ್ಕಳು ಮಾತ್ರ ಇಲ್ಲೆ ಇದ್ದಾರೆ ಎಂದು ಹೇಳಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು