ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೂಡಾ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂಗೆ ನೊಟೀಸ್‌: ಸಿದ್ದರಾಮಯ್ಯರಿಂದ ಕಾನೂನು ಹೋರಾಟಕ್ಕೆ ಸಿದ್ಧತೆ?

PPeepal Media

Peepal Media • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಮೂಡಾ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂಗೆ ನೊಟೀಸ್‌:  ಸಿದ್ದರಾಮಯ್ಯರಿಂದ ಕಾನೂನು ಹೋರಾಟಕ್ಕೆ ಸಿದ್ಧತೆ?

ಬೆಂಗಳೂರು: ಮೈಸೂರಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರಿಗೆ  ರಾಜ್ಯಪಾಲ ಥಾವರಚಂದ್ ಗೆಹಲೋತ್ ನೊಟೀಸ್‌ ನೀಡಿದ್ದು, ಈ ಕುರಿತು ಸಿದ್ದರಾಮಯ್ಯ ಅವರು ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ತರಾತುರಿಯಲ್ಲಿ ರಾಜಕೀಯ ಮತ್ತು ಕಾನೂನು ಹೋರಾಟ ನಡೆಸುವ ಕುರಿತು ಸಿದ್ದರಾಮಯ್ಯ ಉಪಾಹಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಇಂದಿನ ಸಭೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಶಾಸಕರೂ ಆಗಿರುವ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಅವರಿಗೂ ಮುಖ್ಯಮಂತ್ರಿ ಆಹ್ವಾನ ನೀಡಿದ್ದು, ಅವರ ಉಪಸ್ಥಿತಿಯಲ್ಲಿ ಮುಡಾ ವಿಚಾರದಲ್ಲಿನ ಬೆಳವಣಿಗೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ ಎನ್ನಲಾಗಿದೆ.

ರಾಜ್ಯಪಾಲರು ಮುಡಾ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ನೋಟಿಸ್ ನೀಡಿದ್ದಾರೆ. ರಾಜಭವನವನ್ನು  ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಈಗಾಗಲೇ ರಾಜ್ಯಪಾಲರಿಗೆ ನೀಡಲಾಗಿದೆ. ಆದರೂ ದುರುದ್ದೇಶಪೂರ್ವಕವಾಗಿ ಅವರು ನೋಟಿಸ್ ನೀಡಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯ ಮಾತಿಗೆ ಸಚಿವರು ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಬೇರೆ ರಾಜ್ಯಗಳಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜಭವನ ದುರ್ಬಳಕೆ ಆಗಿದೆ. ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದೆ. ಕೇಂದ್ರದ ಈ  ಯತ್ನವನ್ನು ವಿಫಲಗೊಳಿಸಲು ರಾಜಕೀಯವಾಗಿ ಜೊತೆಗೆ ಕಾನೂನಾತ್ಮಕವಾಗಿ ತೀವ್ರ ಹೋರಾಟ ನಡೆಸುವ ಕುರಿತು ಕಾಂಗ್ರೆಸ್‌ ಒಳಗೊಳಗೆ ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಬೆಂಬಲಿಸಿದ ರಾಹುಲ್‌:

ಹೈಕಮಾಂಡ್ ತಮ್ಮ ಬೆನ್ನಿಗೆ ನಿಲ್ಲಲಿದೆ ಎಂಬ ಬಲವಾದ ವಿಶ್ವಾಸದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದೂ ಗೊತ್ತಾಗಿದೆ. ತಮ್ಮ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ತಾನು ಯಾವುದೇ ರೀತಿಯಲ್ಲೂ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿ ಬಂದಿದ್ದಾರೆ. ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುವಂತೆ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು