ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯೋಗೇಶ್ ಗೌಡ ಹತ್ಯೆ ಪ್ರಕರಣ: ಹೈಕೋರ್ಟ್‌ನಿಂದ ವಿನಯ್ ಕುಲಕರ್ಣಿಗೆ ಜಾಮೀನು, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

PPeepal Media Desk

Peepal Media Desk ಮೀಡಿಯಾ, ರಾಜಕೀಯ

• 1 ನಿಮಿಷದ ಓದು

ಯೋಗೇಶ್ ಗೌಡ ಹತ್ಯೆ ಪ್ರಕರಣ: ಹೈಕೋರ್ಟ್‌ನಿಂದ ವಿನಯ್ ಕುಲಕರ್ಣಿಗೆ ಜಾಮೀನು, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಧಾರವಾಡದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯ ಜಾರಿಗೆ ತಾತ್ಕಾಲಿಕ ತಡೆ ನೀಡಿರುವ ಹೈಕೋರ್ಟ್, ಕಠಿಣ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವಿನಯ್ ಕುಲಕರ್ಣಿ ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಜೈಲಿನಿಂದ ಬಿಡುಗಡೆಯಾದರು. ನ್ಯಾಯಾಲಯದ ಆದೇಶದ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪಿದ ನಂತರ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡಿತು.

ಜೈಲಿನ ಮುಖ್ಯ ದ್ವಾರದ ಬಳಿ ನೂರಾರು ಬೆಂಬಲಿಗರು ಜಮಾಯಿಸಿ ಹೂಮಾಲೆ ಹಾಕುವ ಮೂಲಕ ವಿನಯ್ ಕುಲಕರ್ಣಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಕಾರಿನಿಂದಲೇ ಬೆಂಬಲಿಗರತ್ತ ಕೈಬೀಸಿ ಶುಭಾಶಯ ಸ್ವೀಕರಿಸಿದ ಅವರು, ಮಾಧ್ಯಮಗಳ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸ್ಥಳದಿಂದ ತೆರಳಿದರು.

ಪ್ರಕರಣದ ಹಿನ್ನೆಲೆ ಗಮನಿಸಿದರೆ, 2016ರ ಜೂನ್ 15ರಂದು ಧಾರವಾಡದ ಜಿಮ್ ಒಂದರಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಳಿಕ ತನಿಖೆ ನಡೆಸಿದ ಕೇಂದ್ರೀಯ ತನಿಖಾ ದಳ, ವಿನಯ್ ಕುಲಕರ್ಣಿ ಸೇರಿದಂತೆ ಹಲವರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು.

ಈ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಕಳೆದ ಏಪ್ರಿಲ್‌ನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಹಲವು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವಿನಯ್ ಕುಲಕರ್ಣಿ, ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶಿಕ್ಷೆಯ ಜಾರಿಗೆ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿದೆ. ಈ ಮೇಲ್ಮನವಿಯ ಅಂತಿಮ ವಿಚಾರಣೆ ಬಳಿಕ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು