ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

PPeepal Media Desk

Peepal Media Desk ಮೀಡಿಯಾ, ರಾಜಕೀಯ

• 1 ನಿಮಿಷದ ಓದು

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ
ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ
ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು: ಸಿಎಂ

ಬೆಂಗಳೂರು ಮೇ 3:
ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು.

ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.

ವೇತನ‌ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದರು.

ನಮಗೆ 11495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ಗ್ಯಾರಂಟಿಗಳಿಗೆ ಹಣ  ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಟೀಕಿಸಿದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು