ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರದ ಮಲತಾಯಿ ಧೋರಣೆ ವೀರೊಧಿಸಿ ಫೆ. 7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ: ಸಿದ್ದರಾಮಯ್ಯ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಕೇಂದ್ರದ ಮಲತಾಯಿ ಧೋರಣೆ ವೀರೊಧಿಸಿ ಫೆ. 7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆಯಲ್ಲಿ ಮತ್ತು ಬರ ಪರಿಹಾರ ವಿತರಣೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿ ಫೆ.7 ರಂದು ದೆಹಲಿಯ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದರಲ್ಲಿ ರಾಜಕೀಯ ಇಲ್ಲ, ನಮ್ಮ ಹೋರಾಟ ಉತ್ತರ ಭಾರತದ ರಾಜ್ಯಗಳ ವಿರುದ್ಧವೂ ಅಲ್ಲ, ಕೇಂದ್ರದ ಮಲತಾಯಿ ತಾರತಮ್ಯದ ವಿರುದ್ಧ ಮಾತ್ರ ಎಂದರು.
ಇದರಲ್ಲಿ ಕಾಂಗ್ರೆಸ್ಸಿನ ಎಲ್ಲ ಶಾಸಕರು, ವಿಧಾನಪರಿಷತ್, ಸಂಸದರು ಭಾಗವಹಿಸಲಿದ್ದಾರೆ. ತಮ್ಮ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ ಬಿಜೆಪಿಯವರೂ ಇದರಲ್ಲಿ ಭಾಗವಹಿಸಲಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಇಂಥ ತಾರತಮ್ಯಗಳ ಬಗ್ಗೆ ಮಾತೆ ಹೊರಡುತ್ತಿರಲಿಲ್ಲ. ಅಶೋಕ ಅವರಿಗೆ ಏನೂ ಗೊತ್ತಿಲ್ಲ. 26 ಸಂಸದರಂತೂ ಮೌನವಾಗಿದ್ದಾರೆ ಎಂದು ಸಿಎಂ ದೂರಿದರು.
ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನೆ ಕೂರಲ್ಲ: ಡಿಕೆಶಿ
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ ಸಮನ್ವಯತೆಯಿಂದ ನಡೆದುಕೊಂಡು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಮಾತ್ರ ಕಳೆದ 10 ವರ್ಷಗಳಿಂದ ನಮಗೆ ಅನ್ಯಾಯ ಮಾಡುತ್ತಿದೆ. ಇನ್ನು ಮುಂದೆ ಅನ್ಯಾಯ ಸಹಿಸಿಕೊಂಡು ಸುಮ್ಮನೆ ಕೂರಲ್ಲ ಎಂದು ಎಚ್ಚರಿಕೆ ನೀಡಿದರು.
ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಘೋಷಣೆಯಾದ ನೀರಾವರಿ ಇಲಾಖೆಯ ಅನುದಾನವನ್ನು ಇನ್ನು ಬಿಡುಗಡೆ ಮಾಡಿಲ್ಲ. ಅವರು ನುಡಿದಂತೆ ನಡೆಯುತ್ತಾರೆ ಎಂದು ನಂಬಿಕೆ ಇಟ್ಟಿದ್ದೆವು. ಆದರೆ ನಮ್ಮ ನಂಬಿಕೆ, ಹುಸಿಯಾಯಿತು. ನಾವು ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದರೂ ನಮಗೆ ಕೇಂದ್ರದಿಂದ ಸಿಗುವ ಅನುದಾನದಲ್ಲಿ ತೀರಾ ಅನ್ಯಾಯವಾಗುತ್ತಿದೆ. ನಮಗಿಂತ ಕಡಿಮೆ ತೆರಿಗೆ ಪಾವತಿಸುವ ಉತ್ತರ ಭಾರತದ ರಾಜ್ಯಗಳಿಗೆ ನಮಗಿಂತ ಹೆಚ್ಚಿನ ಪಾಲು ನೀಡಲಾಗುತ್ತಿದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾವು ಧ್ವನಿ ರಾಜ್ಯದ ಜನರಿಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಫೆ.7ರಂದು ದೆಹಲಿಯಲ್ಲಿ ಕರ್ನಾಟಕ ರಾಜ್ಯದ ಜನರ ಪರವಾಗಿ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ ಎಂದರು.

ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸರ್ಕಾರದ ವತಿಯಿಂದ ಪತ್ರ ಬರೆದಿದ್ದೇವೆ. ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ನಾವು ಕೇಂದ್ರ ಸಚಿವರನ್ನು ಭೇಟಿ ಮಾಡಿ ವಿವರಿಸಿ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಬರಗಾಲದಿಂದ 223 ತಾಲೂಕುಗಳು ಬರಕ್ಕೆ ತುತ್ತಾಗಿವೆ. ಇದುವರೆಗೂ ಬರಗಾಲದ ಪರಿಹಾರ ಬಿಡುಗಡೆ ಮಾಡಿಲ್ಲ. ನರೇಗಾ ಯೋಜನೆಯಲ್ಲಿ ನೀಡಲಾಗುವ 100 ಮಾನವ ಕೂಲಿ ದಿನಗಳ ಪ್ರಮಾಣವನ್ನು ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳಿಗೆ ಏರಿಕೆ ಮಾಡಬಹುದು ಎಂದು ಕಾನೂನಿನಲ್ಲಿ ಇದೆ. ಅದನ್ನೂ ಅವರು ನೀಡುತ್ತಿಲ್ಲ. ನಿರಂತರವಾಗಿ ಇಷ್ಟ ಅನ್ಯಾಯವಾದರೂ ನಾವು ಇನ್ನೆಷ್ಟು ದಿನ ನೋಡಿಕೊಂಡು ಸುಮ್ಮನೆ ಕೂರಬೇಕು. ನ್ಯಾಯಕ್ಕಾಗಿ, ಜನರ ಬದುಕಿಗಾಗಿ, ಜನರಿಗೆ ಆರ್ಥಿಕ ಶಕ್ತಿ ತುಂಬಲು ಈ ಹೋರಾಟಕ್ಕೆ ಹೆಜ್ಜೆ ಇಟ್ಟಿದ್ದೇವೆ ಎಂದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು