ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಪಕ್ಷ ಮುನ್ನಡೆಸುವವರು ಹಿತ್ತಾಳೆ ಕಿವಿ ಹೊಂದಿರಬಾರದು” ; ವಿಜಯೇಂದ್ರಗೆ ಪರೋಕ್ಷವಾಗಿ ಕುಟುಕಿದ ಪ್ರತಾಪ್ ಸಿಂಹ

P

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

“ಪಕ್ಷ ಮುನ್ನಡೆಸುವವರು ಹಿತ್ತಾಳೆ ಕಿವಿ ಹೊಂದಿರಬಾರದು” ; ವಿಜಯೇಂದ್ರಗೆ ಪರೋಕ್ಷವಾಗಿ ಕುಟುಕಿದ ಪ್ರತಾಪ್ ಸಿಂಹ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಕಾರಣಕ್ಕೆ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಮೇಲೆ ಇನ್ನೂ ಸಹ ಹಗೆ ಇಟ್ಟುಕೊಂಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಕಂಡಕಂಡಲ್ಲಿ ಅವರ ಮೇಲಿನ ಆಕ್ರೋಶ ಹೊರಹಾಕುತ್ತಿದ್ದಾರೆ. ಇಂದೂ ಸಹ ಪಕ್ಷದ ವೇದಿಕೆಯಲ್ಲೇ ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ತಿರುಗಿ ನಿಂತ ಪ್ರತಾಪ್ ಸಿಂಹ ಪಕ್ಷದ ವರಿಷ್ಠರಿಗೆ ಪಕ್ಷದೊಳಗಿನ ಆಂತರಿಕ ಕಲಹದ ಬಗ್ಗೆ ಬಹಿರಂಗಪಡಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಆರ್​ಎಸ್​ಎಸ್​​ ಹಾಗೂ ಬಿಜೆಪಿ ಸಭೆಯಲ್ಲಿ ವಿಜಯೇಂದ್ರ ಮೇಲೆ ಅಸಮಾಧಾನ ಹೊರಹಾಕಿದ ಪ್ರತಾಪ್ ಸಿಂಹ, ಪಕ್ಷದಲ್ಲಿ ನಡೆಯುತ್ತಿರುವ ಕೆಲ ವಿಚಾರಗಳ ಬಗ್ಗೆ ಪ್ರಶ್ನೆ ಮಾಡಿದರೆ ನಮ್ಮನ್ನೇ ಬೇರೆ ರೀತಿಯಾಗಿ ನೋಡೋದು ಏಕೆ. ಪಕ್ಷ ಮುನ್ನಡೆಸೋರು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕೇ ಹೊರತು, ಹಿತ್ತಾಳೆ ಕಿವಿ ಹೊಂದಿರಬಾರದು ಎಂದು ಪರೋಕ್ಷವಾಗಿ ವಿಜಯೇಂದ್ರ ನಾಯಕತ್ವದ ವಿರುದ್ಧ ಮಾತನಾಡಿದ್ದಾರೆ.

ಹಿಂದುತ್ವ ಸಿದ್ಧಾಂತ ಪರ ಸಮರ್ಥನೆ ಮಾಡಿಕೊಂಡಿದ್ದೇ ತಪ್ಪಾಯ್ತಾ. ಟಿಕೆಟ್ ಕೊಡದಿರುವುದಕ್ಕೆ ಕಾರಣವೇ ಇಲ್ಲ, ಆದರೂ ಟಿಕೆಟ್ ಕೈತಪ್ಪಿಸಲಾಯಿತು. ಪಕ್ಷದ ಕೆಲ ಹಿಂದುತ್ವ ಸಮರ್ಥಕರಿಗೂ ಟಿಕೆಟ್ ಕೊಟ್ಟಿಲ್ಲ. ನಾವ್ಯಾರೂ ಹೊಂದಾಣಿಕೆ ಮಾಡಿಕೊಳ್ಳುವವರಲ್ಲ ಅಂತಾ ಟಿಕೆಟ್ ಕೊಡಲಿಲ್ಲವೇ ಎಂದು ಆಕ್ರೋಶ ಹೊರಹಾಕಿದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version