ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕು: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

PPeepal Media Desk

Peepal Media Desk ರಾಜಕೀಯ, ರಾಜ್ಯ

• 2 ನಿಮಿಷದ ಓದು

ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕು: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕವನ್ನು ನಶೆಮುಕ್ತ ರಾಜ್ಯವನ್ನಾಗಿಸುವ ಮುಖ್ಯಮಂತ್ರಿ ಅವರ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ರಾಜ್ಯದ ಪೊಲೀಸ್‌ ಇಲಾಖೆಯ ಮೇಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಂಗಳವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ಸರ್ಕಾರಿ ನೌಕರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮಗಳ ಜೊತೆಗೆ ಜನರಲ್ಲಿ, ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ ‘RISE’ ಹಾಗೂ ‘ಬೇಡ BRO’ ಅಭಿಯಾನಗಳ ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ತಾಲ್ಲೂಕು ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಯುವಕರು ಹಾಗೂ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ವಿರುದ್ಧ ಅರಿವು ಮೂಡಿಸುವಂತೆ ತಾಲ್ಲೂಕು ಮಟ್ಟದ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಬರ ಪರಿಸ್ಥಿತಿಯಲ್ಲಿ ಅನುಸರಿಸಿದ SOP ಮಾದರಿಯಲ್ಲಿ ಕಾರ್ಯನಿರ್ವಹಿಸಿ
ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ದ ಸಂದರ್ಭದಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ರೂಪಿಸಿ ಜಾರಿಗೊಳಿಸಲಾಗಿದ್ದ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಮಾದರಿಯನ್ನು ಗಮನದಲ್ಲಿಟ್ಟುಕೊಂಡು, ಪರಿಸ್ಥಿತಿಗೆ ಅನುಗುಣವಾಗಿ ಇಲಾಖೆಗಳು ಪೂರ್ವಸಿದ್ಧತೆ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಮಸ್ಯೆ ಎದುರಾದ ನಂತರ ಪರಿಹಾರ ಕಂಡುಕೊಳ್ಳುವುದಕ್ಕಿಂತ, ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಇದಕ್ಕಾಗಿ ಈಗಾಗಲೇ ರೂಪಿಸಲಾಗಿರುವ ಕಾರ್ಯವಿಧಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅವರು ಸಲಹೆ ನೀಡಿದರು.

ಒಬ್ಬ ಅರ್ಹ ಮತದಾರನೂ ಮತದಾನದ ಹಕ್ಕಿನಿಂದ ವಂಚಿತನಾಗಬಾರದು
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಅರ್ಹ ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

SIR ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ಪರಿಶೀಲನೆಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ, ಯಾವುದೇ ಒಬ್ಬ ಅರ್ಹ ಮತದಾರನೂ ತನ್ನ ಮತದಾನದ ಹಕ್ಕಿನಿಂದ ವಂಚಿತನಾಗದಂತೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಜನರಿಗೆ ತಲುಪಿಸುವುದು ಅತ್ಯಂತ ಮುಖ್ಯ ಎಂದು ಹೇಳಿದರು. ಕರ್ನಾಟಕದ SIR ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಣಾಮಕಾರಿ ಮಾಹಿತಿ ಅಭಿಯಾನ ನಡೆಸಬೇಕು ಎಂದು ಸೂಚಿಸಿದರು. ರಾಜ್ಯದಲ್ಲಿ SIR ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರ ವಿವರಗಳ ಪರಿಶೀಲನೆ ಹಾಗೂ ಪರಿಷ್ಕರಣೆಯ ಪ್ರಕ್ರಿಯೆ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನಡೆಯುತ್ತಿದೆ.

“ಅರ್ಹ ಮತದಾರರ ಹಕ್ಕು ರಕ್ಷಿಸುವುದು ಪ್ರಜಾಪ್ರಭುತ್ವದ ಮೂಲಭೂತ ಜವಾಬ್ದಾರಿ. ಯಾವುದೇ ಕಾರಣಕ್ಕೂ ಒಬ್ಬ ಅರ್ಹ ಮತದಾರನ ಹೆಸರು ಪಟ್ಟಿಯಿಂದ ಕೈಬಿಡದಂತೆ, ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಿಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು” ಎಂದು ಸಚಿವರು ಹೇಳಿದರು.

ಮಾದಕ ವಸ್ತುಗಳ ನಿಯಂತ್ರಣ, ಸಾರ್ವಜನಿಕ ಜಾಗೃತಿ ಹಾಗೂ ಮತದಾರರ ಹಕ್ಕುಗಳ ರಕ್ಷಣೆಯಂತಹ ಪ್ರಮುಖ ವಿಚಾರಗಳಲ್ಲಿ ಪೊಲೀಸ್‌ ಮತ್ತು ಆಡಳಿತ ವ್ಯವಸ್ಥೆಗಳು ಜನಸ್ನೇಹಿಯಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು