ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧಿಸಲು ಸಿದ್ಧತೆ: ಡಾ.ಪರಮೇಶ್ವರ್‌

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧಿಸಲು ಸಿದ್ಧತೆ: ಡಾ.ಪರಮೇಶ್ವರ್‌

ಬೆಂಗಳೂರು: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.

ನರದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, “ಪ್ರಜ್ವಲ್ ವಿರುದ್ಧ ವಾರೆಂಟ್ ಜಾರಿಯಾಗಿರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಎಸ್‌ಐಟಿ ಕಾಯುತ್ತಿದೆ, ಆತನನ್ನು ಬಂಧಿಸಿ ಹೇಳಿಕೆ ಪಡೆಯಲಿದ್ದಾರೆ” ಎಂದು ತಿಳಿಸಿದರು.

ಮೇ 31 ರಂದು ತನ್ನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವುದಾಗಿ ಭರವಸೆ ನೀಡುವ ವೀಡಿಯೊ ಹೇಳಿಕೆಯನ್ನು ಪ್ರಜ್ವಲ್ ಎರಡು ದಿನಗಳ ಹಿಂದೆ ನೀಡಿದ್ದರು. ಈ ಕುರಿತು ವರದಿಗಾರರ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದರು. ಹ

ಅಧಿಕೃತ ಮೂಲಗಳ ಪ್ರಕಾರ, ಹಾಸನ ಸಂಸದರು ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಿದ್ದು, ಮೇ 31ರ ಮುಂಜಾನೆ ನಗರಕ್ಕೆ ಬಂದಿಳಿಯುವ ನಿರೀಕ್ಷೆಯಿದೆ. ಲ್ಯಾಂಡಿಂಗ್‌ ಆದ ಕೂಡ ಕೂಡಲೆ ಪ್ರಜ್ವಲ್‌ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ (33) ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ರೆಕಾರ್ಡ್‌ ಮಾಡಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಮತದಾನ ಮುಗಿದ ನಂತರ, ಅವರು ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದರು. ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ 18 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು.

ಪೆನ್ ಡ್ರೈವ್ ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಬ್ಬರನ್ನು ಬಂಧಿಸಿರುವ ಕುರಿತು ಕೇಳಿದ ಪ್ರಶ್ನೆಗೆ, “ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನ ಪ್ರಶ್ನೆಗಿಂತ ಹೆಚ್ಚಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಾಗುವುದು” ಎಂದು ಗೃಹ ಸಚಿವರು ಹೇಳಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಒಳಪಡುವ ಸರ್ಕಾರಿ ನಿಗಮದಲ್ಲಿ ಕೋಟ್ಯಂತರ ಹಣ ವಂಚನೆ ಮಾಡಿ, ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವರು ಹೇಳಿದರು.

“ಇಲಾಖೆ ದೂರು ದಾಖಲಿಸಿದೆ. ₹187 ಕೋಟಿ ದುರುಪಯೋಗವಾಗಿದೆ. ಅದರಲ್ಲಿ ₹94 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ವರ್ಗಾಯಿಸಲಾಗಿದೆ. ಪ್ರತಿಯೊಂದೂ ವಿಭಿನ್ನ ಅಂಕಿಅಂಶಗಳನ್ನು ನೀಡುತ್ತದೆ, ಯಾರೋ ₹84 ಕೋಟಿ ಎಂದು ನಮೂದಿಸಿದರೆ, ಇತರರು ₹97 ಕೋಟಿ ಎಂದು ಹೇಳಿದರು. ತನಿಖೆಯಿಂದ ಸತ್ಯಾಂಶ ಹೊರಬರಲಿದೆ” ಎಂದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು