ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರ ಸರ್ಕಾರದ ನೀತಿಗಳಿಂದಲೇ ರಾಜ್ಯದಲ್ಲಿ ಬೆಲೆ ಏರಿಕೆ: ಜಿ.ಪರಮೇಶ್ವರ್‌

PPeepal Media

Peepal Media • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಕೇಂದ್ರ ಸರ್ಕಾರದ ನೀತಿಗಳಿಂದಲೇ ರಾಜ್ಯದಲ್ಲಿ ಬೆಲೆ ಏರಿಕೆ: ಜಿ.ಪರಮೇಶ್ವರ್‌

ಬೆಂಗಳೂರು :ಕೇಂದ್ರ ಸರಕಾರದ ನೀತಿಗಳಿಂದಲೇ ರಾಜ್ಯದಲ್ಲಿ ಬೆಲೆ ಏರಿಕೆ ಆಗುತ್ತಿದೆ. ತೆರಿಗೆ ವಿಚಾರದಲ್ಲಿ ಕೇಂದ್ರವೇ ಹೆಚ್ಚು ನಿಯಂತ್ರಣ ಹೊಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ಗುರುವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ 2 ರೂಗೆ ಏರಿಕೆ ಸ್ವಾಭಾವಿಕ. ಆದರೆ, ಕೇಂದ್ರ ಸರಕಾರ ತೆರಿಗೆ ನಿಯಂತ್ರಿಸಿದರೆ ರಾಜ್ಯಗಳಿಗೆ ಅನುಕೂಲವಾಗುತ್ತದೆ. ಜತೆಗೆ ರಾಜ್ಯ ಸರಕಾರಗಳ ಕಾರ್ಯಕ್ರಮಗಳಿಗೆ ಸಹಾಯ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಕ್ಫ್ ತಿದ್ದುಪಡಿ ಮಸೂದೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭೆಯಲ್ಲಿ ವಕ್ಫ್ ಮಸೂದೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 288 ಜನ ಸದಸ್ಯರು ಇದರ ಪರವಾಗಿ ಮತ ಚಲಾಯಿಸಿದ್ದಾರೆ. ಈ ಕಾರಣದಿಂದಾಗಿ, ರಾತ್ರಿ ಒಂದು ಗಂಟೆಗೆ ಮಸೂದೆಯು ಅಂಗೀಕಾರಗೊಂಡಿದೆ. ಆದರೆ, ಈ ನಿರ್ಧಾರಕ್ಕೆ ಬಹಳಷ್ಟು ಜನರಿಂದ ವಿರೋಧವಿದೆ. ಆದರೆ, ವಿರೋದ ಪಕ್ಷಗಳ ವಿರೋಧ ಕೇಂದ್ರ ಬೆಲೆ ಕೊಡುತ್ತಿಲ್ಲ ಎಂದರು.

ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ಕುರಿತ ಪ್ರಶ್ನೆಗೆ, “ಇದು ಸಭಾಧ್ಯಕ್ಷರಿಗೆ ಬಿಟ್ಟ ವಿಷಯವಾಗಿದ್ದು, ಇದರಲ್ಲಿ ಸರಕಾರದ ಪಾತ್ರ ಇಲ್ಲ. ಸ್ಪೀಕರ್ ಆಯ್ಕೆಯಲ್ಲಿ ಎಲ್ಲರೂ ಒಮ್ಮತದಿಂದ ಭಾಗಿಯಾಗಿದ್ದಾರೆ. ಬಿಜೆಪಿಯವರು ಸಹ ಇದನ್ನು ಬೆಂಬಲಿಸಿದ್ದರು. ಆದರೆ, ಸಭಾಧ್ಯಕ್ಷರ ಪೀಠದ ಬಳಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸ್ಪೀಕರ್ ಎಷ್ಟೇ ಪರಿಪರಿಯಾಗಿ ಕೇಳಿಕೊಂಡರೂ, ಬಿಜೆಪಿಯವರು ಅವರ ಮಾತಿಗೆ ಗೌರವ ಕೊಡದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಿಷಯಗಳು: #kannada #karnataka #peepalmedia #politics
PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು