ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಲ್ತುಳಿತ ದುರಂತ: ಬಿಜೆಪಿಗೊಂದು ನ್ಯಾಯ, ಉಳಿದವರಿಗೊಂದು ನ್ಯಾಯವೇ?: ಪ್ರಿಯಾಂಕ್ ಖರ್ಗೆ ಆಕ್ರೋಶ

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಕಾಲ್ತುಳಿತ ದುರಂತ: ಬಿಜೆಪಿಗೊಂದು ನ್ಯಾಯ, ಉಳಿದವರಿಗೊಂದು ನ್ಯಾಯವೇ?: ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: “ಜೆಪಿಗೊಂದು ನ್ಯಾಯ, ಉಳಿದವರಿಗೊಂದು ನ್ಯಾಯವೇ? ಎಲ್ಲರಿಗೂ ನ್ಯಾಯ ಒಂದೇ ಇರಬೇಕಲ್ಲವೇ?” ಎಂದು ಕಾಲ್ತುಳಿತ ಘಟನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ರಾಜ್ಯ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂಬೈ ರೈಲು ದುರಂತದಲ್ಲಿ ಐವರು ಸಾವಿಗೀಡಾಗಿದ್ದಾರೆ. ಅಲ್ಲಿ ಬಿಜೆಪಿ ಸಿಎಂ-ಡಿಸಿಎಂ ರಾಜೀನಾಮೆ ನೀಡಿದರೇ? ಕುಂಭಮೇಳದ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ಪ್ರಶ್ನಿಸಿತೇ? ಇವರಿಗೆ ಒಂದು ಮಾನದಂಡ, ನಮಗೆ ಮತ್ತೊಂದೇ?” ಎಂದು ಪ್ರಶ್ನಿಸಿದರು.

“ಬಿಜೆಪಿ ಆಡಳಿತದಲ್ಲಿ ಒಂದು ನೀತಿ, ಕಾಂಗ್ರೆಸ್ ಆಡಳಿತದಲ್ಲಿ ಮತ್ತೊಂದು ಯಾಕೆ? ಬಿಜೆಪಿ ಸಿಎಂಗಳು ರಾಜೀನಾಮೆ ನೀಡಿ ನಮ್ಮನ್ನು ಪ್ರಶ್ನಿಸಿದರೆ ಅದಕ್ಕೆ ನೈತಿಕತೆ ಇರುತ್ತದೆ. ಬಿಜೆಪಿ ಘೋರ ತಪ್ಪುಗಳನ್ನು ಮಾಡಿದೆ, ಆದರೂ ನಮಗೆ ನೀತಿ ಉಪದೇಶಿಸಲು ಬರುತ್ತಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

“ನಾವು ಲೋಪವನ್ನು ಒಪ್ಪಿಕೊಂಡಿದ್ದೇವೆ ಮತ್ತು ಅದನ್ನು ಸರಿಪಡಿಸಲು ಕೆಲಸ ಮಾಡುತ್ತಿದ್ದೇವೆ. ಯಾವುದೇ ಪ್ರಶ್ನೆಯಿಂದ ತಪ್ಪಿಸಿಕೊಳ್ಳುತ್ತಿಲ್ಲ. ನಮ್ಮ ಸರ್ಕಾರ ಜವಾಬ್ದಾರಿಯುತವಾಗಿದೆ ಮತ್ತು ಪ್ರಬುದ್ಧವಾಗಿದೆ. ಬಿಜೆಪಿಯಂತೆ ಜವಾಬ್ದಾರಿಯಿಂದ ನುಣುಚಿಕೊಂಡು ಓಡಿಹೋಗುವುದಿಲ್ಲ” ಎಂದು ಅವರು ಹೇಳಿದರು.

“ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತವೆಂದು ಯಾರೂ ಹೇಳಿಲ್ಲ. ಇದು ಖಾಸಗಿ ಕಾರ್ಯಕ್ರಮವಾಗಿತ್ತು, ಆದ್ದರಿಂದ ಜವಾಬ್ದಾರಿ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಆದರೆ, ಈ ಹೇಳಿಕೆಯನ್ನು ಬಿಜೆಪಿ ತಪ್ಪಾಗಿ ಅರ್ಥೈಸುತ್ತಿದೆ. ಬಿಜೆಪಿಗೆ ಇದಕ್ಕಿಂತ ಬೇರೆ ಕೆಲಸವಿಲ್ಲವೇ?” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು