ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನ್ನ ರಾಜಿನಾಮೆ ಕೇಳುವ ಮೂಲಕ ಆರ್‌.ಅಶೋಕ್‌ ತನ್ನ ಅಜ್ಞಾನ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ನನ್ನ ರಾಜಿನಾಮೆ ಕೇಳುವ ಮೂಲಕ ಆರ್‌.ಅಶೋಕ್‌ ತನ್ನ ಅಜ್ಞಾನ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಕೇಳುವ ಮೂಲಕ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, ಅಶೋಕ್‌ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಈ ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು ಅಶೋಕ್‌ ಎಂದು ಸಿದ್ದರಾಮಯ್ಯ ಅಶೋಕ್‌ ಅವರ ಕಾಲೆಳೆದಿದ್ದಾರೆ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ ಅಶೋಕ್‌ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ ಎಂದು ಸಿಎಂ ಆರೋಪಿಸಿದ್ದಾರೆ. ಅವರ ಪೋಸ್ಟ್‌ನ ಲಿಂಕ್‌ ಇಲ್ಲಿದೆ. https://www.facebook.com/story.php?story_fbid=1080158550146683&id=100044576433033&mibextid=oFDknk&rdid=4DBYZoB6M27azbwv

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು