ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಸ್ಥಾನ : ಕಾಂಗ್ರೆಸ್ ಬಿರುಕಿಗೆ ಕಮಲ್ ನಾಥ್ ಮಧ್ಯಸ್ಥಿಕೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಒಂದು ಕಡೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದರೆ ಇನ್ನೊಂದು ಕಡೆ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿರುಕು ಹೆಚ್ಚುತ್ತಿದೆ. ಸಧ್ಯ ಬಿರುಕಿಗೆ ತೇಪೆ ಹಚ್ಚಲು ಕಾಂಗ್ರೆಸ್ ನ ‘ಟ್ರಬಲ್ ಶೂಟರ್’ ಖ್ಯಾತಿಯ ಕಮಲ್ ನಾಥ್ ಮಧ್ಯಸ್ಥಿಕೆ ವಹಿಸಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಈಗ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಬಣಗಳ ಮೂಲಕ ದೊಡ್ಡ ಬಿರುಕು ಉಂಟಾಗಿದೆ. ರಾಜ್ಯ ರಾಜಕೀಯದಲ್ಲಿ ಈ ಬಗ್ಗೆ ಬಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಮುಖವಾಗಿ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿಯಾಗಿ ಸಚಿನ್ ಪೈಲಟ್ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಈ ನಡುವೆ ಸಚಿನ್ ಪೈಲಟ್ ಅವರನ್ನು ಉತ್ತರಾಧಿಕಾರಿ ಮಾಡುವ ನಿರ್ಧಾರಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದು ಬಂಡಾಯದ ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಕೂಡ ಮುಖ್ಯಮಂತ್ರಿಯಾಗಿಯೂ ಮುಂದುವರೆಯುವಂತೆ ಗೆಹ್ಲೋಟ್ ಬೆಂಬಲಿಗ 90 ಕ್ಕೂ ಹೆಚ್ಚು ಶಾಸಕರು ಒತ್ತಡ ಹಾಕುತ್ತಿದ್ದಾರೆ.

ನಿನ್ನೆಯ ದಿನ ಕಾಂಗ್ರೆಸ್ ಪಕ್ಷದ ಮುಂದಿನ ಮುಖ್ಯಮಂತ್ರಿ ಹೆಸರನ್ನು ನಿರ್ಧರಿಸಲು ಸಭೆ ಕರೆಯಲಾಗಿತ್ತು. ಕಾಂಗ್ರೆಸ್ ಸೇರಿದಂತೆ ಸರ್ಕಾರವನ್ನು ಬೆಂಬಲಿಸುವ ಪಕ್ಷೇತರ ಶಾಸಕರನ್ನೂ ಸಹ ಸಭೆಗೆ ಆಹ್ವಾನಿಸಲಾಗಿತ್ತು. ಮೂಲಗಳ ಪ್ರಕಾರ, ಗೆಹ್ಲೋಟ್ ಬೆಂಬಲಿಗ ಶಾಸಕರು ಇಲ್ಲಿನ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಿಲ್ಲ. ಈ ಬೆಳವಣಿಗೆ ನಂತರ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ಸಧ್ಯ ಈ ಬಿರುಕು ಮತ್ತು ಬಂಡಾಯದ ಬಿಸಿ ತಣ್ಣಗಾಗಿಸಲು ಪಕ್ಷದ ಪ್ರಮುಖ ನಾಯಕ ಕಮಲ್ ನಾಥ್ ಅವರು ಮಧ್ಯಸ್ಥಿಕೆ ವಹಿಸಿದ್ದಾರೆ. ಈ ನಡುವೆ ಭಾರತ್ ಜೋಡೋ ಯಾತ್ರೆಯಲ್ಲಿ ಇದ್ದ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರು ತುರ್ತಾಗಿ ಇಂದು ದೆಹಲಿಯ ಸೋನಿಯಾ ಗಾಂಧಿಯವರ ನಿವಾಸಕ್ಕೆ ಭೇಟಿ ನೀಡಿ ರಾಜಸ್ಥಾನದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ವಿವರಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ

ಇಂದು ಸಂಜೆಯ ವೇಳೆಗೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗಲಿದೆ. ಆದರೂ ಈ ಬಿರುಕು ಬೂದಿ ಮುಚ್ಚಿದ ಕೆಂಡದಂತಿದ್ದು, ಮುಂದಿನ ರಾಜಕೀಯ ಬೆಳವಣಿಗೆ ಯಾವ ಹಂತಕ್ಕೆ ಮುಟ್ಟಲಿದೆ ಎಂಬುದನ್ನು ಕಾದು ನೋಡಬೇಕಿದೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು