ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಹೊಸ ಸುದ್ದಿ: ತೆಲಂಗಾಣದ ರಾಜ್ಯಪಾಲರಾಗ್ತಾರಂತೆ ಸೂಪರ್‌ ಸ್ಟಾರ್‌ ರಜನಿ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಹೊಸ ಸುದ್ದಿ: ತೆಲಂಗಾಣದ ರಾಜ್ಯಪಾಲರಾಗ್ತಾರಂತೆ ಸೂಪರ್‌ ಸ್ಟಾರ್‌ ರಜನಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇತ್ತೀಚಿನ ವದಂತಿಗಳ
ನಂಬುವುದಾದರೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಶೀಘ್ರದಲ್ಲೇ ಸಾಂವಿಧಾನಿಕ ಹುದ್ದೆಯೊಂದು ಸಿಗಲಿದೆ.

ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಿಸುವ ಸಾಧ್ಯತೆ ಇದೆಯೆಂದು ವರದಿಯಾಗಿದೆ. ಆದರೆ ಇದನ್ನು ಬಿಜೆಪಿಯಾಗಲೀ, ರಜನಿಯಾಗಲೀ ಸ್ಪಷ್ಟಪಡಿಸಿಲ್ಲ. ಆದರೆ ಈ ಕುರಿತು ಬಹಳಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಸದ್ಯದಲ್ಲೇ ಚಿತ್ರರಂಗದಿಂದ ನಿವೃತ್ತಿ ಹೊಂದಲು ಮುಂದಾಗಿರುವ ರಜನಿಕಾಂತ್ ಅವರಿಗೆ ಬಿಜೆಪಿ ರಾಷ್ಟ್ರೀಯ ನಾಯಕತ್ವ ಈ ಬಂಪರ್ ಆಫರ್ ನೀಡಿದೆ ಎನ್ನಲಾಗುತ್ತಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ರಾಜಕೀಯ ಮೈಲೇಜ್ ಪಡೆಯಲು ತಮಿಳು ಸೂಪರ್ ಸ್ಟಾರ್ ನೆರವಾಗಲಿದ್ದಾರೆ ಎಂದು ಬಿಜೆಪಿ ನಾಯಕತ್ವ ಅಭಿಪ್ರಾಯಪಟ್ಟಿರುವಂತಿದೆ. ಅಷ್ಟೇ ಅಲ್ಲ, ತಮಿಳುನಾಡಿನಲ್ಲೂ ಪಕ್ಷದ ಜನಪ್ರಿಯತೆಯ ಮೇಲೆ ಸ್ವಲ್ಪ ಪ್ರಭಾವ ಬೀರಲಿದೆ ಎನ್ನುವುದು ಅದರ ಲೆಕ್ಕಾಚಾರ ಎನ್ನಲಾಗುತ್ತಿದೆ. “ರಜನಿಕಾಂತ್ ಅವರಿಗೆ ರಾಜ್ಯಪಾಲರ ಹುದ್ದೆ ನೀಡಿ ಗೌರವಿಸುವ ಮೂಲಕ, ಬಿಜೆಪಿಯು ಇಡೀ ದಕ್ಷಿಣ ಭಾರತದ ಜನರ ವಿಶ್ವಾಸವನ್ನು ಗಳಿಸುವ ಭರವಸೆ ಹೊಂದಿದೆ” ಎಂದು ಮೂಲಗಳು ತಿಳಿಸಿವೆ. ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರು ಸೂಪರ್‌ಸ್ಟಾರ್ ಶೀಘ್ರದಲ್ಲೇ ಭಾರತದ ರಾಜ್ಯವೊಂದರ ಗವರ್ನರ್ ಆಗಲಿದ್ದಾರೆ ಎಂಬ ವದಂತಿಗಳಿಗೆ ಕೆಲವು ದಿನಗಳ ಹಿಂದೆ ಉತ್ತೇಜನ ನೀಡುವ ಹೇಳಿಕೆ ನೀಡಿದ್ದರು.

ಈ ಮೂಲಕ ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಮೆರಗು ಬಂದಿದೆ. ಸತ್ಯನಾರಾಯಣ ರಾವ್ ಅವರು ನೇರ ರಾಜಕೀಯಕ್ಕೆ ಬರದೇ ಇರಬಹುದು, ಆದರೆ ಖಂಡಿತಾ ರಾಜ್ಯದ ರಾಜ್ಯಪಾಲರಾಗುತ್ತಾರೆ ಎಂದಿದ್ದರು. ರಜನಿಕಾಂತ್ ಅವರು ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ಅವರು ಭಾರತೀಯ ಜನತಾ ಪಕ್ಷಕ್ಕೆ ಹತ್ತಿರವಾಗುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ರಜನಿ ಅಂದು ಆದಿತ್ಯನಾಥ್ ಅವರ ಪಾದ ಮುಟ್ಟಿ ನಮಸ್ಕರಿಸಿದ್ದರು. ಬಿಜೆಪಿ ತನ್ನ ಮುಂಬರುವ ಚುನಾವಣಾ ಪ್ರಚಾರಕ್ಕಾಗಿ ದಕ್ಷಿಣದ ಚಲನಚಿತ್ರ ತಾರೆಯರನ್ನು ಸೆಳೆಯುವತ್ತ ಗಮನ ಹರಿಸುತ್ತಿದೆ. ಹಾಗಾಗಿ ರಜನಿಕಾಂತ್ ಅವರನ್ನು ಮೋದಿ ಸರ್ಕಾರ ಎಂದಾದರೂ ರಾಜ್ಯಪಾಲರನ್ನಾಗಿಸಿದರೆ ಆಶ್ಚರ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೋ ಕಾದು ನೋಡಬೇಕು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು