ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿಯ ವಿಶೇಷ ವಿಮಾನದ ಪ್ರಯಾಣ ಬಿಟ್ಟಿ ಶೋಕಿಯೇ? : ಬಿಜೆಪಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

P

Peepal Media Desk • ರಾಜಕೀಯ

• 1 ನಿಮಿಷದ ಓದು

ಪ್ರಧಾನಿಯ ವಿಶೇಷ ವಿಮಾನದ ಪ್ರಯಾಣ ಬಿಟ್ಟಿ ಶೋಕಿಯೇ? : ಬಿಜೆಪಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ರಾಜ್ಯದ ಹಲವು ಪ್ರದೇಶದ ಜನರಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ಬರ ಪರಿಹಾರವನ್ನು, ಆದಷ್ಟು ಶೀಘ್ರವಾಗಿ ರೈತರಿಗೆ ನೀಡಬೇಕು ಹಾಗೂ ಇನ್ನು ಹಲವಾರು ಯೋಜನೆಗಳಿಗೆ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲವರು ಶಾಸಕರು ವಿಮಾನದಲ್ಲಿ ದಿಲ್ಲಿಗೆ ಪ್ರಯಾಣಿಸಿದ ಕುರಿತು ರಾಜ್ಯ ಬಿಜೆಪಿ ನೀಡಿರುವ ವ್ಯಂಗ್ಯಕಾರದ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯ ಬಿಜೆಪಿ ಘಟಕ “ಕಾಂಗ್ರೆಸ್‌ ಸರ್ಕಾರದ ಸಚಿವರು ಮತ್ತು ಶಾಸಕರು ತಮ್ಮ ನೋವು ಕೇಳಲು ಬಾರದೆ ತಮ್ಮ ಹೆಸರಲ್ಲಿ ಖಾಸಗಿ ವಿಮಾನದಲ್ಲಿ ದಿಲ್ಲಿಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ಕರ್ನಾಟಕದ ರೈತರು ದಡ್ಡರಲ್ಲ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುವ ರಾಜ್ಯ ಕಾಂಗ್ರೆಸ್ ಸಚಿವರು ತೆರಿಗೆದಾರರ ಹಣದಲ್ಲಿ ಬಿಟ್ಟಿ ಐಶಾರಾಮಿತನ ಅನುಭವಿಸಿ ಒಣ ಶೋಕಿಯಲ್ಲಿ ನಿರತರಾಗಿರುವುದಕ್ಕೆ ರೈತರು ಛೀ ಥೂ ಎಂದು ಉಗಿಯುತ್ತಿದ್ದಾರೆ” ಎಂದು ಟ್ವಿಟ್ಟರ್ ಮೂಲಕ ಕಿಡಿಕಾರಿತ್ತು. ರಾಜ್ಯ ಬಿಜೆಪಿ ಮಾಡಿದ ಆಪಾದನೆಗೆ ಸಿದ್ದರಾಮಯ್ಯ ಖಡಕ್ಕಾಗಿ ಉತ್ತರಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version