ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಗುಲಾಮಿ’ ‘ನಾಡದ್ರೋಹಿ’ ರಾಜ್ಯ ಕಾಂಗ್ರೆಸ್‌ : ಜಾತ್ಯತೀತ ಜನತಾದಳ ಆರೋಪ

PPeepal Media Desk

Peepal Media Desk • ಮೀಡಿಯಾ, ರಾಜಕೀಯ

• 1 ನಿಮಿಷದ ಓದು

‘ಗುಲಾಮಿ’ ‘ನಾಡದ್ರೋಹಿ’ ರಾಜ್ಯ ಕಾಂಗ್ರೆಸ್‌ : ಜಾತ್ಯತೀತ ಜನತಾದಳ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೆ ತಮಿಳುನಾಡಿಗೆ ರಾತ್ರೋರಾತ್ರಿ ಕಾವೇರಿ ನೀರು ಹರಿಸಿ ಮಂಡ್ಯದ ರೈತರ ಹೊಟ್ಟೆ ಮೇಲೆ ಹೊಡೆಯುವ ಮೂಲಕ ರೈತರಿಗೆ ದ್ರೋಹ ಎಸಗಿದೆ ಎಂದು ಕರ್ನಾಟಕ ರಾಜ್ಯ ಜಾತ್ಯತೀತ ಜನತಾದಳ ಆರೋಪಿಸಿದೆ.

ಮುಂದುವರೆದು, ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ತಮಿಳುನಾಡು ಸರ್ಕಾರದ ಆಜ್ಞೆ ಪಾಲಿಸುತ್ತಿದ್ದಾರೆಯೇ ? ಎಂದು ಪ್ರಶ್ನಿಸಿದೆ.

ರಾಜ್ಯದ ಜನ ಹನಿ ಹನಿ ನೀರಿಗೆ ಹಾಹಾಕಾರ ಪಡುತ್ತಿದ್ದಾರೆ. ಆದರೆ, “ಗುಲಾಮಿ ಕಾಂಗ್ರೆಸ್‌” ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದೆ ಎಂದು ಆರೋಪಿಸುವುದರ ಜೊತೆಗೆ ಕಿಡಿಕಾರಿದೆ.

ʼಮಂಡ್ಯದವರು ಛತ್ರಿಗಳುʼ ಎಂದು ಅವಮಾನ ಮಾಡಿದ್ದ ಡಿಕೆಶಿಯವರು, ಇಂಡಿಯಾ ಮೈತ್ರಿಕೂಟದ ಸ್ಟಾಲಿನ್‌ ಸರ್ಕಾರವನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ನಾಚಿಕೆಗೇಡಿನ ಕೆಲಸ ಎಂದು ಜಾತ್ಯತೀತ ಜನತಾದಳ ತನ್ನ ಅಧಿಕೃತ ಎಕ್ಸ್‌ ಖಾತೆನಲ್ಲಿ ದೂರಿದೆ.

ತಮಿಳುನಾಡು ಸರ್ಕಾರದ ಆಜ್ಞೆ ಏನು?

ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಒಂದು ವೇಳೆ ಅಣೆಕಟ್ಟೆ ಕಟ್ಟಲು ಪ್ರಯತ್ನಿಸಿದ್ದಲ್ಲಿ ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಆಜ್ನೆ ಮಾಡುವ ಮೂಲಕ, ಎಚ್ಚರಿಕೆ ನೀಡಿತ್ತು.

ರಾಜ್ಯ ಜಾತ್ಯತೀತ ಜನತಾದಳ ಆರೋಪಕ್ಕೆ ಕಾರಣವೇನು?

ರಾಜ್ಯ ಕಾಂಗ್ರೆಸ್‌ ಸರ್ಕಾರ, ಮೇಕೆದಾಟು ಯೋಜನೆಯ ಡಿಪಿಆರ್ ಇನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರೇ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ಹುಸಿ ಭರವಸೆ ಕೊಟ್ಟು, ಈಗ ಡಿಎಂಕೆ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದೀರಿಲ್ಲ, ಯಾಕೆ ನೀವು ಮೇಕೆದಾಟು ಯೋಜನೆಯ ಡಿಪಿಆರ್ ಇನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಲ್ಲ ಎಂದು ಜಾತ್ಯತೀತ ಜನತಾದಳ ಪ್ರಶ್ನಿಸಿದೆ.

ಜೊತೆಗೆ ಇತ್ತೀಚಿಗಷ್ಟೇ, ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು, ಕ್ಷೇತ್ರ ಪುನರ್‌ವಿಂಗಡಣೆ ಕುರಿತು, ಸಭೆಯಲ್ಲಿ ಭಾಗಿಯಾಗಲು ತಮಿಳುನಾಡಿಗೆ ಹೋಗಿ ಬಂದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಜೊತೆಗೆ ಮಾತು ಕಥೆ ನಡೆಸಿ, ಹೊಂದಾಣಿಕೆ ರಾಜಕೀಯ ಮಾಡಿಕೊಂಡು, ತಮಿಳುನಾಡಿಗೆ ರಾತ್ರೋರಾತ್ರಿ ಕಾವೇರಿ ನೀರು ಹರಿಸಿತ್ತಿದ್ದಾರೆ ಎಂದು ರಾಜ್ಯ ಜಾತ್ಯತೀತ ಜನತಾದಳ ಆರೋಪಿಸಿದೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು