ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಮೊಳಗುತ್ತಿದೆ ಘೋಷ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ್ದಾರೆ.

“ಸರ್ಕಾರವು ತರಾತುರಿಯಲ್ಲಿ ಹೊರಡಿಸಿರುವ ನೇಮಕಾತಿ ಆದೇಶವನ್ನು ಹಿಂಪಡೆಯಬೇಕು. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಅಳವಡಿಕೆಗೆ ತೀರ್ಮಾನಿಸಿ, ಕೂಡಲೇ ಆದೇಶ ಹೊರಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ದಲಿತರ ಜನಸಂಖ್ಯೆ 18% ನಷ್ಟಿದೆ. ಹಾಗಾಗಿಯೇ ನಿವೃತ್ತ ನ್ಯಾಯಮರ್ತಿ ನಾಗಮೋಹನ್ ದಾಸ್ 17%ಗೆ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ ಮತ್ತು ಅದು ಜಾರಿಯಲ್ಲಿದೆ. ಈ ಸಾಮಾಜಿಕ ನ್ಯಾಯದ ನೀತಿಯನ್ನು ನ್ಯಾಯಾಂಗೀಯ ಸವಾಲುಗಳಿಂದ ರಕ್ಷಿಸಲು ರಾಜ್ಯದ 56% ಮೀಸಲಾತಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಸರ್ವ ಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ನೇರ ನೇಮಕಾತಿ, ಬಡ್ತಿ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಯಲ್ಲಿ 2001ರ ಹಿಂದಿನ ಬ್ಯಾಕ್ಲಾಗ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತಿದೆ. ಈ ನಿಯಮವನ್ನು 2001ರ ನಂತರದ ಬ್ಯಾಕ್ಲಾಗ್ ಹುದ್ದೆಗಳಿಗೂ ಮುಂದುವರೆಸಬೇಕು ಹಾಗೂ ಒಳ ಮೀಸಲಾತಿ ಜಾರಿಯಾಗಬೇಕು. ಎಸ್ಇಪಿ-ಟಿಎಸ್ಪಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಂಪೂರ್ಣವಾಗಿ ಜಾರಿಯಾಗಬೇಕು” ಎಂದು ಆಗ್ರಹಿಸಿದ್ದಾರೆ.

“ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳು ಒಂದು ಘಟಕ ಎಂದು ಪರಿಗಣಿಸಬೇಕೆನ್ನುವ ಪ್ರಸ್ತಾವನೆಯನ್ನು ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಲೇಬೇಕು. ಸಮಾಜ ಕಲ್ಯಾಣವನ್ನು ಸಮರ್ಪಕವಾಗಿ ನಿರ್ವಹಿಸದೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಚಿವ ಎಚ್.ಸಿ. ಮಹಾದೇವಪ್ಪ ಅವರನ್ನು ಕೂಡಲೇ ಬದಲಾಯಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ ,  ವೇಣುಗೋಪಾಲ್ ಮೌರ್ಯ,   ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು , ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಇದ್ದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು