ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂಡಿಯಾ ಮೈತ್ರಿ ಕೂಟ: ಅಧ್ಯಕ್ಷರಾಗಿ ಸೋನಿಯಾ ಗಾಂಧಿ, ಸಂಚಾಲಕರಾಗಿಬಿಹಾರ ಸಿಎಂ ನಿತೀಶ್ ಕುಮಾರ್

P

Peepal Media Desk • ರಾಜಕೀಯ

• 1 ನಿಮಿಷದ ಓದು

ಪಾಟ್ನಾ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA ಒಕ್ಕೂಟಕ್ಕೆ ಸೋನಿಯಾ ಗಾಂಧಿ ಅವರು ಅಧ್ಯಕ್ಷೆಯಾಗುವ ಸಾಧ್ಯತೆ ಇದ್ದು, ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಮೈತ್ರಿ ಕೂಟದ ಸಂಚಾಲಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವಿಪಕ್ಷ ಒಕ್ಕೂಟದ 11 ಸದಸ್ಯನ್ನು ಒಳಗೊಂಡ ಸಮನ್ವಯ ಸಮಿತಿಗೆ ನಿತೀಶ್ ಕುಮಾರ್ ಕನ್ವೀನರ್ ಆಗುವ ನಿರೀಕ್ಷೆ ಇದ್ದು, INDIA ಮೈತ್ರಿ ಕೂಟದ ಮೂರನೇ ಸಭೆ ಆಗಸ್ಟ್‌ 31 ಹಾಗೂ ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ಆಯೋಜನೆಗೊಂಡಿದೆ.

ಈ ಸಭೆಯಲ್ಲಿ ಅಧ್ಯಕ್ಷರು ಹಾಗೂ ಸಂಚಾಲಕರ ಆಯ್ಕೆ ಕುರಿತಾಗಿ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಾರಥ್ಯದ ಎನ್‌ಡಿಎ ವಿರುದ್ಧ ರಣತಂತ್ರ ರೂಪಿಸುತ್ತಿರುವ ಇಂಡಿಯಾ ಮೈತ್ರಿ ಕೂಟ, ತನ್ನ ಒಕ್ಕೂಟವನ್ನು ಇನ್ನಷ್ಟು ಬಲ ಪಡಿಸಲು ಹಾಗೂ ಇನ್ನಷ್ಟು ತೀಕ್ಷ್ಣವಾಗಿ ಸರ್ಕಾರದ ವಿರುದ್ಧ ಹೋರಾಡಲು ತಂತ್ರಗಾರಿಕೆ ರೂಪಿಸಲು ನಿರ್ಧರಿಸಿದ್ದು, ನಿತೀಶ್ ಕುಮಾರ್ ಇಂಡಿಯಾ ಮೈತ್ರಿ ಕೂಟದ ಸಂಚಾಲಕರನ್ನಾಗಿ ನೇಮಿಸಲು ಕಾಂಗ್ರೆಸ್ ನಾಯಕರೂ ಕೂಡಾ ಸಮ್ಮತಿ ಸೂಚಿಸಿದ್ದಾರೆ ಎಂದು ಬಿಹಾರದ ಮಹಾ ಮೈತ್ರಿ ಕೂಟದ ಮೂಲಗಳು ತಿಳಿಸಿವೆ. ಆದರೆ, ಮುಂಬೈ ಸಭೆಯಲ್ಲೇ ಈ ಕುರಿತಾಗಿ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಯುಪಿಎ ಮೈತ್ರಿ ಕೂಟದ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರನ್ನೇ ಇಂಡಿಯಾ ಮೈತ್ರಿ ಕೂಟದ ಅಧ್ಯಕ್ಷರನ್ನಾಗಿ ಮುಂದುವರೆಸಲು ಕಾಂಗ್ರೆಸ್ ನಾಯಕರು ಬಯಸಿದ್ದಾರೆ. ಒಂದು ವೇಳೆ ಸೋನಿಯಾ ಗಾಂಧಿ ಅವರು ಅಧ್ಯಕ್ಷೆಯಾಗಲು ಸಮ್ಮತಿ ಸೂಚಿಸದಿದ್ದರೆ, ಅವರು ಹೆಸರಿಸುವ ಯಾರಿಗಾದರೂ ಅಧ್ಯಕ್ಷ ಪಟ್ಟ ಸಿಗಬಹುದಾಗಿದೆ. ಇನ್ನು ಸಮನ್ವಯ ಸಮಿತಿ ಮುಖ್ಯಸ್ಥರ ನೇಮಕ ವಿಚಾರದಲ್ಲೂ ಸೋನಿಯಾ ಗಾಂಧಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಹಾರ ಮಹಾ ಘಟಬಂಧನದ ವಿಶ್ವಾಸರ್ಹ ಮೂಲಗಳು ತಿಳಿಸಿವೆ.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version